ಗ್ರಾಮೀಣ ಭಾಗಗಳು ಮೂಲಭೂತ ಸೌಕರ್ಯಗಳಿಂದ ಸಾಕಷ್ಟು ವಂಚಿತಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿಯೇ ಇರುವ ಮಲಿಯಾಬಾದ್ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಯೋಜನೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ತಿಳಿಸಿದರು.
ರಾಯಚೂರು ತಾಲ್ಲೂಕಿನ ಮಲಿಯಾಬಾದ ಗ್ರಾಮದಲ್ಲಿ ಇಂದು ಕೆಕೆಆರ್.ಡಿಬಿ ಅನುದಾನದಲ್ಲಿ 10.00 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು 10.00 ಲಕ್ಷ ರೂ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು
ಮಲಿಯಾಬಾದ ಗ್ರಾಮವು ಜಿಲ್ಲಾ ಕೇಂದ್ರದಿಂದ ಸಮೀಪವಿದ್ದರೂ ಅಭಿವೃದ್ಧಿಯಿಂದ ವಂಚಿತಗೊಂಡಿರುವದು ಸರಿಯಲ್ಲ. ಈ ಗ್ರಾಮದ ಜನರಿಗೂ ಎಲ್ಲಾ ರೀತಿಯ ಸೌಲಭ್ಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ
ಮುಂದಿನ ದಿನಗಳಲ್ಲಿ ಈ ಗ್ರಾಮದಲ್ಲಿ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನದಾಗಿ ಕಾರ್ಯನಿರ್ವಹಿಸಲಾಗುವುದು. ಅದೇ ರೀತಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಮುದಾಯ ಮುಂದೆ ಬರಬೇಕು. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಹೇಳಿದರು.
ಈ ವೇಳೆ ಗ್ರಾಮದ ಮುಖಂಡರು , ಕಾರ್ಯಕರ್ತರು ,ನಿವಾಸಿಗಳು ಇನ್ನಿತರು ಇದ್ದರು.
