ಧರ್ಮಸ್ಥಳ ಸರಣಿ ಅತ್ಯಾಚಾರ ಕೊಲೆ ಪ್ರಕರಣ: ಸಾಮೂಹಿಕ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ತಲೆಬುರುಡೆ ಪತ್ತೆ

Date:

Advertisements

ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಸಂದರ್ಭದಲ್ಲಿ ತಲೆಬುರುಡೆ ಪತ್ತೆಯಾಗಿದೆ. ‘ಸಾಮೂಹಿಕ ಅಂತ್ಯಕ್ರಿಯೆ’ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ತಲೆಬುರುಡೆ ಪತ್ತೆಯಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದಾರೆ. ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.

ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು

Advertisements

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ತನಿಖೆಯ ಭಾಗವಾಗಿ ‘ಸಾಮೂಹಿಕ ಅಂತ್ಯಕ್ರಿಯೆ’ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ತಲೆಬುರುಡೆ ಪತ್ತೆಯಾಗಿದೆ.

ಎಸ್‌ಪಿಯವರಿಗೆ ಸಲ್ಲಿಸಿರುವ ಸುಮಾರು ಆರು ಪುಟಗಳ ದೂರನ್ನು ವಕೀಲರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ಸುರಕ್ಷತೆಯ ದೃಷ್ಟಿಯಿಂದ ಆ ವ್ಯಕ್ತಿಯ ಹೆಸರನ್ನು ಇನ್ನೂ ಕೂಡ ಬಹಿರಂಗಗೊಳಿಸಿಲ್ಲವಾದರೂ, ಆ ವ್ಯಕ್ತಿ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದರು ಎಂದು ಖಾತ್ರಿಪಡಿಸಿದೆ. ಅಲ್ಲದೇ, ಅವರು 1995ರಿಂದ 2014ರ ಡಿಸೆಂಬರ್‌ ವರೆಗೆ ಉದ್ಯೋಗದಲ್ಲಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

Download Eedina App Android / iOS

X