ಉಡುಪಿ | ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ – ಬಿಪಿನ್‌ಚಂದ್ರ ಪಾಲ್ ನಕ್ರೆ

Date:

Advertisements

ಕಾರ್ಕಳದ ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪತ್ರಕರ್ತ ಬಿಪಿನ್‌ಚಂದ್ರ ಪಾಲ್, ನಕ್ರೆ ಅವರು ಆಗಮಿಸಿದ್ದರು. ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು. ಪತ್ರಕರ್ತರು ಎಲ್ಲರವರಾಗಿರಬೇಕು ಹೊರತು ಯಾರೋ ಒಬ್ಬ ವ್ಯಕ್ತಿಯವನಾಗಿರಬಾರದು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ “ಈ ಸಮಾಜದಲ್ಲಿ ಧ್ವನಿಯಿಲ್ಲದವರ ಧ್ವನಿಯಾಗಿರುವವರು ಪತ್ರಕರ್ತರು. ಇಂದಿನ ಸಂಕೀರ್ಣ ಸಮಾಜದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಭರಾಟೆಯ ನಡುವಿನಲ್ಲಿ ಪತ್ರಿಕೆಗಳು ಇಂದಿಗೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ದೇಶದಲ್ಲಿರುವ ಪ್ರಜೆಗಳಿಗೆ ಸೇವೆ ಸಲ್ಲಿಸುವುದೇ ದೇಶಪ್ರೇಮ. ಈ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದು ನಿಜವಾಗಿಯೂ ಅವರು ಅಭಿನಂದನಾರ್ಹರು” ಎಂದು ಹೇಳಿದರು. ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ “ ಪತ್ರಕರ್ತರು ಸುದ್ದಿಯ ಬಗ್ಗೆ ಸಮಗ್ರ ವಸ್ತುನಿಷ್ಟ ಮಾಹಿತಿ ಸಂಗ್ರಹಿಸಿ ವಿಶ್ಲೇಷಿಸಿ ವರದಿ ಮಾಡಬೇಕು. ರಾಗ ದ್ವೇಷ ಪಕ್ಷಪಾತಗಳಿಲ್ಲದೆ ಪತ್ರಿಕಾ ಧರ್ಮ ಹಳಿ ತಪ್ಪದಂತೆ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಧ್ಯಮಬಿಂಬ ಪತ್ರಿಕೆಯ ಹಿರಿಯ ವರದಿಗಾರ ಸತೀಶ ಎಚ್ ಶೆಟ್ಟಿ ಅವರನ್ನು ಕ್ರೈಸ್ತಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸತೀಶ ಶೆಟ್ಟಿ ಅವರು ತಮ್ಮ ವರದಿಗಾರಿಕೆಯ ಅನುಭವವನ್ನು ಹಂಚಿಕೊಂಡರು.

Advertisements

ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷಿ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನಲ್‌ನ ವಸಂತ್ ಕುಮಾರ್, ನಿವೃತ್ತ ಪತ್ರಕರ್ತರಾದ ಪ್ರದೀಪ್ ನಾಯಕ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತ ಉಪನ್ಯಾಸಕಿ ಮೇಘಶ್ರೀ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X