ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ ಸ್ಪಷ್ಟನೆ

Date:

Advertisements

ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ, ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದೇ ಹೊರತು ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಬೀದರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಆ ಕಾರ್ಯಕ್ರಮದಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ ಕುರಿತಂತೆ ನನಗೆ ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು. ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದೇನೆ” ಎಂದರು.

“ಕಸ್ತೂರಿ ರಂಗನ್ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಇಂದಿಗೆ ಅದು ಪ್ರಸ್ತುತವೇ ಎಂಬ ವಾದವೂ ಇದೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿದರೆ ಜೀವನ, ಜೀವನೋಪಾಯಕ್ಕೆ ತೊಂದರೆ ಆಗುತ್ತದೆ ಎಂಬ ಭೀತಿಯೂ ಆ ಭಾಗದ ಜನರಲ್ಲಿದೆ. ಹೀಗಾಗಿ ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸರ್ಕಾರ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

Advertisements

“ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ ಕೈಗಾರಿಕೆಗಳು ನಡೆಯಬಾರದು. ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕಗಳಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಯಕರು ಹತಾಶರಾಗಿ ಸರ್ಕಾರದ ವಿರುದ್ಧ ಅಪಪ್ರಚಾರಕ್ಕಿಳಿದಿದ್ದಾರೆ: ಕೃಷ್ಣಭೈರೇಗೌಡ

“ಕಸ್ತೂರಿ ರಂಗನ್ ವರದಿಯಲ್ಲಿ ಹಲವು ಸಡಿಲಿಕೆಗೂ ಸಂಜಯ್ ಕುಮಾರ್ ಸಮಿತಿ ಸಮ್ಮತಿಸುತ್ತಿದೆ. ವಿಶ್ವದ ಜೀವವೈವಿಧ್ಯತೆಯ 8 ಅದ್ಭುತ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟ ಉಳಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಆದರೆ, ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿರುವ ರೀತಿ ತಾವು ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ಮಾಡಿಲ್ಲ” ಎಂದು ಪುನರುಚ್ಚರಿಸಿದರು.

ಪಶ್ಚಿಮಘಟ್ಟ, ಅಲ್ಲಿನ ಸಸ್ಯ ಸಂಕುಲ ಮತ್ತು ಪ್ರಾಣಿ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದ, ತಮ್ಮ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಈ ರೀತಿ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಬೀದರ್ ನಲ್ಲಿ ನಿನ್ನೆ ನಡೆದ ಪತ್ರಿಕಾ ದಿನಾಚರಣೆಯಲ್ಲೂ ತಾವು ಸ್ಪಷ್ಟೀಕರಣ ನೀಡಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X