ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

Date:

Advertisements
  • ಹೊಸ ಪಕ್ಷ ಸ್ಥಾಪಿಸಿ ಸೀಟು ಗೆಲ್ಲುವಂತೆ ಸಿದ್ದರಾಮಯ್ಯಗೆ ಸವಾಲು
  • ಸಿ ವೋಟರ್‌ ಸಮೀಕ್ಷೆ ಅಂಕಿ ಅಂಶ ತಳ್ಳಿಹಾಕಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ, ಎರಡು ಸೀಟು ತರಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ‘ಜೆಡಿಎಸ್‌ನಲ್ಲಿ ಅಪ್ಪ ಮಕ್ಕಳ ಮಾತು ಕೇಳದಿದ್ದರೆ ಪಕ್ಷದಿಂದ ಹೊರ ಹಾಕುತ್ತಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿದ್ದಾಗ ಪಾಳೆಗಾರಿಕೆ ಮಾಡಿಕೊಂಡು ದೇವೇಗೌಡರನ್ನು ಹೆದರಿಸಿಕೊಂಡಿದ್ದರು. ಹಿಂದೆ ಬ್ಯಾನರ್‌ನಲ್ಲಿ ಭಾವಚಿತ್ರ ಇಲ್ಲ ಅಂತ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಈ ಮಹಾಶಯ. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸೀಟು ತರಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ಜೆಡಿಎಸ್ ಬೆಳೆಸದಿದ್ದರೆ ನಿಮ್ಮನ್ನು ಕಾಂಗ್ರೆಸ್‌ನವರು ಎಲ್ಲಿ ಕರೆಯುತ್ತಿದ್ದರು. ಮೂಸಿಯೂ ನೋಡುತ್ತಿರಲಿಲ್ಲ. ಮೈಸೂರಲ್ಲಿ ಎಂಟು ಜನ ಶಾಸಕರನ್ನು ಕರೆದುಕೊಂಡು ಹೋಗಿ ಮತ್ತೆ ಎಷ್ಟು ಗೆಲ್ಲಿಸಿಕೊಂಡರು. ಹೋಗಲಿ ಅವರು ಗೆದ್ದಿದ್ದು ಎಷ್ಟು ವೋಟಿನಿಂದ? ಕೇವಲ 200 ವೋಟಿನಿಂದ ಗೆದ್ದು ಮುಖ ಉಳಿಸಿಕೊಂಡರು. ಅವರಿಗೆ ಜನತೆಯ ಮೂಲಕ ಉತ್ತರ ಕೊಡಿಸುತ್ತೇನೆ” ಎಂದು ಕಿಡಿಕಾರಿದ್ದಾರೆ.

Advertisements

ಎರಡೂ ರಾಷ್ಟ್ರೀಯ ಪಕ್ಷಗಳು ಒಂದಾಗಿವೆ

“ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳೂ ಒಂದಾಗಿ ಜೆಡಿಎಸ್‌ ವಿರುದ್ಧ ಷಡ್ಯಂತ್ರ ರೂಪಿಸಿವೆ. ಎ ಟೀಮ್, ಬಿ ಟೀಮ್‌ಗಳಂತೆ ಕೆಲಸ ಮಾಡುತ್ತಿವೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿ ನಮ್ಮ ವಿರುದ್ಧ ಒಳ ಒಪ್ಪಂದದ ಆರೋಪ ಮಾಡಿವೆ. ಎರಡೂ ಪಕ್ಷಗಳಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇನ್ನಾದರೂ ಈ ರಾಷ್ಟ್ರೀಯ ಪಕ್ಷಗಳು ಒಳ ಒಪ್ಪಂದ ಆರೋಪಕ್ಕೆ ಫುಲ್‌ಸ್ಟಾಪ್ ಇಡಬೇಕು. ಇವರಿಗೆ ಜೆಡಿಎಸ್‌ಅನ್ನು ಟೀಕೆ ಮಾಡುವುದೇ ನಿತ್ಯ ಕಾಯಕವಾಗಿದೆ. ಎರಡೂ ಪಕ್ಷಗಳ ಭೀತಿ ಎಷ್ಟಿದೆ ಎನ್ನುವುದಕ್ಕೆ ಇದೇ ಸಾಕ್ಷಿ” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

“ಜವಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ಹೇಳುತಾರೆ, ಹೈದರಾಬಾದ್‌ನಲ್ಲಿ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ಆಗಿದೆ ಎಂದು. ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳ್ತಾರೆ, ಬಿಜೆಪಿ ಜತೆ ಜೆಡಿಎಸ್ ಒಳ ಒಪ್ಪಂದ ಆಗಿದೆ ಎಂದು. ಈ ಇಬ್ಬರಿಗೆ ಇದು ಬಿಟ್ಟು ಬೇರೆ ವಿಚಾರವೇ ಇಲ್ಲವೇ? ವಿಷಯ ಇಲ್ಲ ಅಂದರೆ, ಮಾತನಾಡಲು ನಾನೇ ವಿಷಯ ಕೊಡುತ್ತೇನೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್, ಬಿಜೆಪಿಗೆ ಅಧಿಕಾರಕ್ಕೆ ಬರುವ ಯಾವ ಸ್ಪಷ್ಟ ಭರವಸೆಯೂ ಇಲ್ಲ. ಎರಡೂ ಪಕ್ಷಗಳಿಗೆ ಆತಂಕ ಶುರುವಾಗಿದೆ. ಜೆಡಿಎಸ್‌ನವರು ಎಲ್ಲಿ ಬಿಜೆಪಿ ಜತೆ ಹೋಗ್ತಾರೆ ಅಂತ ಕಾಂಗ್ರೆಸ್‌ನವರಿಗೆ, ಕಾಂಗ್ರೆಸ್ ಜತೆ ಎಲ್ಲಿ ಹೋಗ್ತಾರೆ ಅಂತ ಬಿಜೆಪಿಯವರಿಗೆ ಭಯವಿದೆ. ಹೀಗಾಗಿ ಪದೇಪದೆ ನಮ್ಮನ್ನು ಕೆಣಕುತ್ತಿದ್ದಾರೆ. ನಾನು ಈ ಬಾರಿ 123 ಕ್ಷೇತ್ರಗಳನ್ನು ಗುರಿ ಇಟ್ಟುಕೊಂಡು ಹೊರಟಿದ್ದೇವೆ. ಅದನ್ನು ಸಹಿಸುವುದು ಎರಡೂ ಪಕ್ಷಗಳಿಗೆ ಆಗುತ್ತಿಲ್ಲ. ಹೊಟ್ಟೆಕಿಚ್ಚಿನಿಂದ ಹೀಗೆ ಮಾತನಾಡುತ್ತವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ನನಗೆ ಸಮೀಕ್ಷೆಗಳ ಆತಂಕವಿಲ್ಲ

ಸಿ ವೋಟರ್ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ನನಗೆ ಸಮೀಕ್ಷೆಗಳ ಬಗ್ಗೆ ಆತಂಕವಿಲ್ಲ. ಸಿ ವೋಟರ್‌ ಈ ಹಿಂದೆ ಕಾಂಗ್ರೆಸ್ 120 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದಿತ್ತು. ಆದರೆ, ಕಾಂಗ್ರೆಸ್ ಗೆದ್ದ ಸೀಟುಗಳೆಷ್ಟು?” ಎಂದು ಸಮೀಕ್ಷೆಯ ಭವಿಷ್ಯವನ್ನು ತಳ್ಳಿ ಹಾಕಿದ್ದಾರೆ.

“ರಾಷ್ಟ್ರೀಯ ಪಕ್ಷಗಳು ತಮ್ಮ ಕಾರ್ಯತಂತ್ರದ ಭಾಗವಾಗಿ ಯಾವುದೋ ಕಂಪನಿ ಹೆಸರಾಕಿ ಸರ್ವೆ ರಿಪೋರ್ಟ್ ಅಂತ ಬಿಡುಗಡೆ ಮಾಡುತ್ತಿವೆ. ನಾನು ಕೂಡ ನಾಳೆ ದುಡ್ಡು ಕೊಟ್ಟು ಈ ರೀತಿ ಮಾಡಿ ಅಂತ ಹೇಳಬಹುದು. ಅಂತ ಅಗತ್ಯ ನನಗಿಲ್ಲ” ಎಂದಿದ್ದಾರೆ.

ಬಿಜೆಪಿ-ಕಾಂಗ್ರೆಸ್ ಮೈತ್ರಿಯಾದರೂ ಅಚ್ಚರಿ ಇಲ್ಲ

“ಮುಂದೆ ಬಿಜೆಪಿ, ಕಾಂಗ್ರೆಸ್ ಮೈತ್ರಿ ಆದರೂ ಅಚ್ಚರಿ ಇಲ್ಲ. ಈ ಬಗ್ಗೆ ಯಾವುದೇ ಸಂಶಯವೇ ಬೇಡ. ನನ್ನ ಮೈತ್ರಿ ಸರ್ಕಾರ ತೆಗೆಯಲು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವ ಹಣ ಕೊಟ್ಟ ವ್ಯಕ್ತಿಗೆ ಮದ್ದೂರಿನಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಲು ಮುಂದಾಗಿದೆ. ಅದೇ ವ್ಯಕ್ತಿಯ ಬಿಜೆಪಿ ಜತೆಗಿನ ಸಂಬಂಧ ಎಂತದ್ದು? ಆತ ಶ್ರೀಲಂಕಾಕ್ಕೆ ಏಕೆ ಓಡಿ ಹೋಗಿದ್ದ?” ಎಂದು ಕುಟುಕಿದ್ದಾರೆ

“ಸಚಿವ ನಾರಾಯಣಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಹೊರಟಿದ್ದಾರೆ ಏಕೆ? ಅದರ ಹಿಂದಿನ ಹಕೀಕತ್ತು ಏನು? ಎಲ್ಲವೂ ಜನರಿಗೆ ಗೊತ್ತಿದೆ. ಹೀಗಾಗಿ ಯಾವುದೇ ಅನುಮಾನ ಬೇಡ, ಕಾಂಗ್ರೆಸ್ – ಬಿಜೆಪಿ‌ ಮೈತ್ರಿ ಒಳ ಒಪ್ಪಂದ ಅದೆಷ್ಟು ಆಳವಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X