ಗೋಬಿ ಮಂಚೂರಿ ಅಂಗಡಿಗೆ ವಿದ್ಯುತ್ ವೈರ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿಯೇ ಯುವಕ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ಸಂಜೆ ಜರುಗಿದೆ.
ಮೃತನನ್ನು ಸಂದೀಪ್ ಸಿಂಗ ಮಂಗಲಸಿಂಗ್ ಗುಂತಕಲ್ (36) ಎಂದು ಗುರುತಿಸಲಾಗಿದೆ. ಐತಿಹಾಸಿಕ ಮುದಗಲ್ ಪಟ್ಟಣದ ಕೋಟೆ ಮುಂಭಾಗದ ಪ್ರಾಂಗಣದಲ್ಲಿ ಮೊಹರಂ ಹಬ್ಬದ ನಿಮಿತ್ಯವಾಗಿ ಚೌಡಿಕಟ್ಟೆಯ ಹತ್ತಿರ ಗೋಬಿ ಮಂಚೂರಿ ಅಂಗಡಿಗೆ ವಿದ್ಯುತ್ ವೈರ್ ಕನೆಕ್ಷನ್ ಹಾಕುವಾಗ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ
ಕಳೆದ 17 ವರ್ಷಗಳಿಂದಲೂ ಪ್ರತಿ ವರ್ಷ ಮೊಹರಂ ಹಬ್ಬದ ಸಂದರ್ಭದಲ್ಲಿ ಗೋಬಿ ಮಂಚೂರಿ ವ್ಯಾಪಾರ ಮಾಡಲು ಮುದಗಲ್ ಪಟ್ಟಣಕ್ಕೆ ಆಗಮಿಸುತ್ತಿದ್ದ ಎಂದು ಸ್ಥಳೀಯರಿಂದ ಮಾಹಿತಿ ತಿಳಿದು ಬಂದಿದೆ. ನಂತರ ಸಮದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಸ್ಥಳಕ್ಕೆ ಮುದಗಲ್ ಪಿ.ಎಸ್.ಐ ವೆಂಕಟೇಶ ಮಾಡಗೇರಿ ಭೇಟಿ ನೀಡಿ ಪ್ರಖರಣದ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು.
