ಶಿವಮೊಗ್ಗ | ಬೊಮ್ಮನಕಟ್ಟೆಯಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ : ಕೊಲೆಯಲ್ಲಿ ಅಂತ್ಯ

Date:

Advertisements

ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ.

ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ ಸ್ನೇಹಿತರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪವನ್ ಶಿವಕುಮಾರ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾನೆ.

ಪೊಲೀಸ್ ಕಾರ್ಯಾಚರಣೆ ಘಟನೆ ನಡೆದ ಬೆನ್ನಲ್ಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶಿವಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X