ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ‘ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದು ಪುನರುಚ್ಚರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ.
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ
ಕರ್ನಾಟಕದಲ್ಲಿ ನವೆಂಬರ್ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ಚರ್ಚೆಯನ್ನು ಸ್ಪಷ್ಟವಾಗಿ ಅಲ್ಲಗಳೆದ ಸಿದ್ದರಾಮಯ್ಯ, ‘ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ’ ಎಂದು ದೆಹಲಿಯಲ್ಲಿ ಗುರುವಾರ ಹೇಳಿದ್ದರು.
ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ.
— CM of Karnataka (@CMofKarnataka) July 11, 2025
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ… pic.twitter.com/C1CyM6rWVw
