ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕಾಂಗ್ರೆಸ್‌ ಸೇರ್ಪಡೆ

Date:

Advertisements

ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ ದನಿ ಶಕ್ತಿ ನೀಡಿರುವುದೇ ಹೆಗ್ಗಳಿಕೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

“ಬೇರೆ ಯಾವುದೇ ಪಕ್ಷದಲ್ಲಿ ಇಂತಹ ಅವಕಾಶ ಸಿಗುವುದಿಲ್ಲ. ನನಗೆ ಬೇರೆ ಪಕ್ಷದಲ್ಲಿ ಇಂತಹ ಖುರ್ಚಿ (ಅಧಿಕಾರ) ನೀಡಲು ಸಾಧ್ಯವಾಗುತ್ತಿರಲಿಲ್ಲ. ವೇದಿಕೆಯಲ್ಲಿರುವ ಪಕ್ಷದ ನಾಯಕರಿಗೆ ಇಂತಹ ಸ್ಥಾನ ನೀಡಲು ಯಾವುದೇ ಪಕ್ಷದಲ್ಲಿ ಆಗುತ್ತಿರಲಿಲ್ಲ. ಕಾಂಗ್ರೆಸ್ ದಿಂದ ಮಾತ್ರ ಸಾಧ್ಯ” ಎಂದರು.

“ಬಿ.ಟಿ.ಲಲಿತಾ ನಾಯಕ್ ಅವರು ಕವಿ ಮನಸ್ಸಿನ ಹೋರಾಟಗಾರ್ತಿ. ಅವರ ಬದುಕೇ ಒಂದು ಹೋರಾಟ. ಮಾಜಿ ಮಂತ್ರಿಯಾಗಿ, ಶಾಸಕರಾಗಿ ಅನೇಕ ಸಂಘಟನೆಗಳಲ್ಲಿ ದುಡಿದಿರುವವರು. ಹೋರಾಟ ಅನ್ನುವುದೇ ಲಲಿತಾ ನಾಯಕ್ ಅವರ ಬ್ರ್ಯಾಂಡ್. ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಪಕ್ಷ ಸೇರಿರುವ ಎಲ್ಲಾ ಮುಖಂಡರುಗಳಿಗೆ ತುಂಬು ಹೃದಯದ ಸ್ವಾಗತ” ಎಂದು ಹೇಳಿದರು.

“ನಾವು ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಮಾಡುವಾಗ ಮೊಣಕಾಲ್ಮೂರಿನ ಬಳಿ ಓರ್ವ ವೃದ್ಧೆ ಬಂದು ರಾಹುಲ್ ಗಾಂಧಿ ಅವರಿಗೆ ಸೌತೇ ಕಾಯಿ ಕೊಟ್ಟರು. ಆಗ ಆ ಅಜ್ಜಿ ಒಂದು ಮಾತು ಹೇಳಿದರು. ಭೂಮಿಯಲ್ಲಿ ಬೆಳೆದಿರುವ ಸೌತೇಕಾಯಿ ಎಂದು ಹೇಳಿದರು. ಇಂತಹ ಕಾರ್ಯಕ್ರಮವನ್ನು ಬಿಜೆಪಿ, ಜನತಾದಳ ನೀಡಲಿಲ್ಲ. ಪಿಂಚಣಿಗಳು, ವಿದ್ಯೆ, ಆಸ್ಪತ್ರೆ, ಹಸಿದವರಿಗೆ ಅನ್ನ ಸೇರಿದಂತೆ ಬಡವರ ಬದುಕಿನಲ್ಲಿ ಬದಲಾವಣೆ ತಂದಿರುವ ಪಕ್ಷ ಎಂದರೆ ಕಾಂಗ್ರೆಸ್ ಪಕ್ಷ ಮಾತ್ರ” ಎಂದರು.

“ಈ ದೇಶಕ್ಕೆ ಸಂವಿಧಾನ, ರಾಷ್ಟ್ರಗೀತೆ, ಜಾತ್ಯಾತೀತ ತತ್ವ, ರಾಷ್ಟ್ರಧ್ವಜ ಹೀಗೆ ಈ ರಾಷ್ಟ್ರಕ್ಕೆ ಗೌರವ ತಂದುಕೊಟ್ಟಿರುವ ಕೆಲಸ ಮಾಡಿರುವುದು ಕಾಂಗ್ರೆಸ್ ಮಾತ್ರ. ಈ ಕೆಲಸವನ್ನು ಬಿಜೆಪಿ ಮಾಡಿದೆಯೇ? ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಣೆ ಮಾಡಿದ್ದೇವೆ. ಈ ಕ್ರಾಂತಿಕಾರಿ ಕೆಲಸವನ್ನು ಬಿಜೆಪಿ ಮಾಡಿದ್ದಾರೆಯೇ? ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಸಂವಿಧಾನ ರಕ್ಷಣೆಗೆ ನಾವು ಬೆಳಗಾವಿಯಲ್ಲಿ ಸಮಾವೇಶ ಮಾಡಿದ್ದೇವೆ. ಮಹಾತ್ಮ ಗಾಂಧಿ ಅವರು ಕುಳಿತಂತಹ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿದ್ದಾರೆ” ಎಂದು ಹೇಳಿದರು.

“ಬೆಲೆ ಏರಿಕೆಯಿಂದ ತೊಂದರೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇತ್ತು. ಯಾವುದನ್ನು ಮುಟ್ಟಿದರೂ ಬೆಲೆ ಏರಿಕೆ ಬಿಸಿ ಅನುಭವಿಸಬೇಕಿತ್ತು. ಅದಕ್ಕೆ ನಾವು ಸಂಸಾರ ಸುಗಮವಾಗಿ ಸಾಗಲು ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭ ಮಾಡಲಾಯಿತು” ಎಂದು ಹೇಳಿದರು.

“ಇಡೀ ರಾಜ್ಯದಾದ್ಯಂತ ನಾವು ನೀಡುತ್ತಿರುವ ಎಲ್ಲ ಯೋಜನೆಗಳನ್ನು ಲೆಕ್ಕ ಹಾಕಿದರೆ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಜನರ ಕಲ್ಯಾಣಕ್ಕೆ ಕಾಂಗ್ರೆಸ್ ನೀಡುತ್ತಿದೆ. ನಾವು ಜಾತಿ ಬಗ್ಗೆ ಚಿಂತನೆ ಮಾಡುವವರಲ್ಲ, ನೀತಿ ಬಗ್ಗೆ ಯೋಚನೆ ಮಾಡುವವರು. ಇಲ್ಲಿ ಇರುವ ಹೆಚ್ಚಿನ ಜನ ಹಿಂದುಗಳು. ನಾವು ಬಿಜೆಪಿಯವರಂತೆ ಹಿಂದು ಮಾತ್ರ ಮುಂದು ಎಂದು ಹೇಳುವುದಿಲ್ಲ. ಸಮಾಜದ ಎಲ್ಲಾ ಜಾತಿ, ವರ್ಗದವರು ಸೇರಿ ಒಂದು ಎನ್ನುವವರು. ನಾವು ಯಾವುದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದವರಲ್ಲ” ಎಂದರು.

“ಸಂವಿಧಾನವನ್ನು ಒಂದಷ್ಟು ಜನ ದುರುಪಯೋಗ ಮಾಡಿಕೊಳ್ಳಬಹುದು ಆದರೆ ಅದು ತಾತ್ಕಾಲಿಕ. ಕಾಂಗ್ರೆಸ್ ಪಕ್ಷದ ಇರುವುದೇ ಸಂವಿಧಾನ ಹಾಗೂ ದೇಶದ ಜನರನ್ನು ರಕ್ಷಣೆ ಮಾಡಲು. ನೆಹರು ಕುಟುಂಬ ತಮ್ಮ ಆಸ್ತಿಗಳನ್ನೇ ಈ ದೇಶಕ್ಕೆ ನೀಡಿದೆ. ಸೋನಿಯಾ ಗಾಂಧಿ ಅವರು ನನಗೆ ಅಧಿಕಾರ ಬೇಡ ಎಂದು ಮನಮೋಹನ್ ಸಿಂಗ್ ಅವರಿಗೆ ಅಧಿಕಾರ ನೀಡಿ ದೇಶದ ಉಳಿವಿಗಾಗಿ ಪಣ ತೊಟ್ಟವರು. ಇಡೀ ಪ್ರಪಂಚದಲ್ಲಿ ಇಂತಹ ತ್ಯಾಗ ಮತ್ತೊಂದಿಲ್ಲ” ಎಂದು ಹೇಳಿದರು.

“ಭವ್ಯವಾದ ಇತಿಹಾಸವಿರುವ ಕಾಂಗ್ರೆಸ್ ಪಕ್ಷದಲ್ಲಿ ಇರುವುದೇ ನಮ್ಮ ಭಾಗ್ಯ. ಯಾವುದೇ ಸ್ಥಾನಮಾನ ಬೇಡ ಎಂದು ಹೇಳಿದ, ಪಕ್ಷಕ್ಕಾಗಿ ದುಡಿಯುತ್ತೇನೆ ಎಂದ ಲಲಿತಾ ನಾಯಕ್ ತಾಯಿಗೆ ಹಾಗೂ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X