ಉಡುಪಿ | “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ

Date:

Advertisements

“ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಇಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ್ ಎಸ್. ಗಂಗಣ್ಣನವರ್ ರವರಿಂದ ಹಸಿರು ಬಾವುಟ ತೋರಿಸುವುದರ ಮುಖಾಂತರ ಅಧೀಕೃತವಾಗಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ, ನಿಮ್ಮ ತಂಡಗಳ ಕಾರ್ಯಕ್ಕೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹರಿರಾಮ್ ಶಂಕರ್ ಐಪಿಎಸ್, ಶ್ರೀ ಸುಧಾಕರ ಎಸ್ ನಾಯ್ಕ ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ, ಶ್ರೀ ಪರಮೇಶ್ವರ ಹೆಗಡೆ ಕೆ.ಎಸ್. ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ, ಪ್ರಭು ಡಿ.ಟಿ ಕೆ.ಎಸ್.ಪಿ.ಎಸ್ ಪೊಲೀಸ್ ಉಪಾಧೀಕ್ಷಕರು ಉಡುಪಿ ಉಪ ವಿಭಾಗ, ಉಡುಪಿ ನಗರ ಠಾಣೆಯ ಮತ್ತು ಉಡುಪಿ ಸಂಚಾರ ಠಾಣೆಯ ಪಿಎಸ್ಐ ರವರಾದ, ಶ್ರೀ ಭರತೇಶ್, ಶ್ರೀ ನಾರಾಯಣ, ಶ್ರೀ ಪ್ರಕಾಶ್ ಸಾಲಿಯಾನ್, ಶ್ರೀ ಹುಸೇನ್ ಸಾಬ್ ಮತ್ತು ಸಿಬ್ಬಂದಿಯವರು ಹಾಜರಿದ್ದರು.

1006161609

ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಇಂದು ಉಡುಪಿ ಉಪ ವಿಭಾಗದ ಉಡುಪಿ ನಗರ ಠಾಣೆ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ “ಮನೆಮನೆ ಪೊಲೀಸ್” ಅಭಿಯಾನ ಕೈಗೊಂಡಿದರು, ಸಾರ್ವಜನಿಕರಿಗೆ “ಮನೆ ಮನೆ ಪೊಲೀಸ್” ಅಭಿಯಾನ ಸಂದರ್ಭದಲ್ಲಿ ಸೈಬರ್ ಅಪರಾಧ ಮಾದಕ ವಸ್ತು ಡ್ರಗ್ಸ್‌ , ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬ್ರ ಪಡೆದುಕೊಳ್ಳಲಾಯಿತು. ಸಾರ್ವಜನಿಕರರಿಂದ ಅವರ ದೂರು – ದುಮ್ಮಾನಗಳನ್ನು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisements

ಈ ಅರಿವು ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಠಾಣೆಯಿಂದ ರಚಿಸಲಾಗಿರುವ ತಂಡದಲ್ಲಿ ಪಿಐ/ಪಿಎಸ್ಐ, ಎಎಸ್ಐ, ಮಹಿಳಾ ಮತ್ತು ಪುರುಷ ಸಿಬ್ಬಂದಿಗಳು ಒಳಗೊಂಡಿದ್ದಾರೆ. ಉಡುಪಿ ನಗರ ಠಾಣೆಯ 28, ಮಣಿಪಾಲ 45, ಬ್ರಹ್ಮಾವರ 30 ಮತ್ತು ಕೋಟ 25 ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶವನ್ನು ತಿಳಿಸಲಾಯಿತು. ತಂಡದ ನೇತೃತ್ವವನ್ನು ಪಿಎಸ್ಐ/ಎಎಸ್ಐ ರವರು ವಹಿಸಿಕೊಂಡು ಪ್ರತಿ ಮನೆಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ. ಸಾರ್ವಜನಿಕರು ಭೇಟಿಯ ವೇಳೆ ಪೊಲೀಸರೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆ. ಈ ಕಾರ್ಯಕ್ರಮ ಪ್ರತಿ ಮನೆಗೆ ತಲುಪ ಬೇಕಾಗಿರುವುದರಿಂದ ಕನಿಷ್ಟ 3 ರಿಂದ 3½ ತಿಂಗಳವರೆಗೆ ಪ್ರತಿ ದಿನ ಚಾಲಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X