ಚಿತ್ರದುರ್ಗ | ಗುರು ಪೌರ್ಣಿಮೆ ಅಂಗವಾಗಿ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳಿಂದ ಮಕ್ಕಳ ಪ್ರಥಮ ಅಕ್ಷರಾಭ್ಯಾಸ

Date:

Advertisements

ಎಸ್.ಜೆ.ಎಸ್ ಸಮೂಹ ವಿದ್ಯಾಸಂಸ್ಥೆ ಚಿತ್ರದುರ್ಗದಲ್ಲಿ ಗುರುಪೂರ್ಣಿಮಾ ನಿಮಿತ್ತ ಹಮ್ಮಿಕೊಂಡಿದ್ದ
ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಕ್ಕಳ ಪ್ರಥಮ ಅಕ್ಷರಭ್ಯಾಸ ಮಾಡಿಸಿದರು. ಅಕ್ಷರಾಭ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಶ್ರೀಗಳು “ಅಕ್ಷರ ಎಂಬ ಶಬ್ಧಕ್ಕೆ ನಾಶವಿಲ್ಲದಿರುವುದು ಎಂದರ್ಥ. ಮೌಲಿಕವಾಗಿ ಇದು ನಾಶವಿಲ್ಲದ ಪರತತ್ವವನ್ನೇ ಹೇಳುತ್ತದೆ. ಅಭ್ಯಾಸವೆಂದರೆ ಆ ತತ್ವಕ್ಕೆ ತನ್ನನ್ನು ಅಭಿಮುಖವಾಗಿ ಇರಿಸಿಕೊಳ್ಳುವುದು” ಎಂದು ಅರ್ಥೈಸಿದರು.

1002303213
ಎಸ್ ಕೆ ಎಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

“ಚಿಕ್ಕಂದಿನಿಂದಲೇ ಅಸಾಮಾನ್ಯ ಬಾಲ ಪ್ರತಿಭೆಗಳನ್ನು ಗುರುತಿಸಬೇಕು. ಕೆಲವು ಮಕ್ಕಳ ಬುದ್ದಿಮತ್ತೆ ವಿಶೇಷವಾಗಿರುತ್ತದೆ. ವಯಸ್ಸಿಗೂ ಮೀರಿದ ಜ್ಞಾನ, ಬುದ್ದಿವಂತಿಕೆಯಿಂದ ಅವರು ಜಗತ್ತಿನ ಗಮನ ಸೆಳೆಯುತ್ತಾರೆ. ವಿಶೇಷವಾದುದನ್ನು ಸಾಧಿಸುತ್ತಾರೆ” ಎಂದು ಭೋವಿ ಗುರುಪೀಠದ ಶ್ರೀಗಳು ಅಭಿಪ್ರಾಯಪಟ್ಟರು.

1002303214

“ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾದ ಬಗ್ಗೆ ಅರಿವು ಮೂಡಿಸುವ ಬಾಲಜಾಗೃತಿ ಹೆಚ್ಚಾಗಬೇಕು. ಪ್ರತಿ ಮಗುವಿಗೆ ಅನ್ನ, ಆರೋಗ್ಯದೊಂದಿಗೆ ಅಕ್ಷರ ಅತಿ ಅವಶ್ಯಕ. ಬದುಕಿನ ಜಂಜಾಟದಲ್ಲಿ ಏನೇ ಸಮಸ್ಯೆಗಳು ಎದುರಾದರೂ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಉತ್ತಮ ಶಿಕ್ಷಣದ ಮೂಲಕ ತಮ್ಮ ಮಕ್ಕಳನ್ನು ಸಮಾಜದ ಉನ್ನತ ಶ್ರೇಣಿಯಲ್ಲಿ ಅಲಂಕರಿಸುವಂತೆ ಜೀವನೋತ್ಸಾಹ ತುಂಬಬೇಕು” ಎಂದು ಕರೆ ನೀಡಿದರು.

1002303211

“ಮಕ್ಕಳು ಅನುಕರಣೆಯನ್ನು ಹೆಚ್ಚು ಮಾಡುವುದರಿಂದ ಮಕ್ಕಳು ಮನೆಯಲ್ಲಿದ್ದಾಗ ಟಿವಿ ಮತ್ತು ಮೊಬೈಲ್ ಗಳಿಂದ ಪೋಷಕರು ಸ್ವತಃ ದೂರವಿರಬೇಕು. ಮಕ್ಕಳೊಂದಿಗೆ ಧ್ಯಾನ, ಅಧ್ಯಯನ ಮಾಡುವ ರೂಢಿಯನ್ನು ಬೆಳೆಸಿಕೊಳ್ಳಬೇಕು. ಮನೆಯೇ ಮೊದಲ ಪಾಠಶಾಲೆ, ತಂದೆ-ತಾಯಿಗಳೇ ಮೊದಲ ಗುರುಗಳಾಗಿರುವುದರಿಂದ ತಂದೆ ತಾಯಿಗಳ ಮೂಲಕ ಉಜ್ವಲ ಬೆಳಕನ್ನು ಮಕ್ಕಳು ಕಾಣಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರೀಕರ ಆಗ್ರಹ

ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ಸಿಬ್ಬಂದಿ, ಶಿಕ್ಷಕೇತರ ಸಿಬ್ಬಂದಿ, ಮಕ್ಕಳು ಹಾಗೂ ಪೋಷಕ ವರ್ಗದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X