ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ ಪ್ರದೇಶ ಮೂಲದ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಗುಜರಾತ್ | ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಕಾರ್ಮಿಕರು ಆಸ್ಪತ್ರೆಗೆ ದಾಖಲು
ಸದ್ಯ ಗಾಯಾಳುವನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮೂವರೂ ಕಾರ್ಮಿಕರು ಎಂಆರ್‌ಪಿಎಲ್ OM&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಗಿದ್ದರು ಎಂದು ವರದಿಯಾಗಿದೆ.
