ಉಡುಪಿ | ಜು 14 ರಂದು ಸೌಹಾರ್ದ ಸಂಚಾರ, ಮಸೀದಿಯಿಂದ ಚರ್ಚ್ ವರೆಗೆ ಕಾಲ್ನಡಿಗೆ ಜಾಥಾ

Date:

Advertisements

ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವುಗೊಳ್ಳುತ್ತಿದ್ದು, ಹಲ್ಲೆ, ಹತ್ಯೆಗಳು ಸಾಮಾನ್ಯವಾಗುತ್ತಿದೆ. ಯಾರೂ ಯಾರನ್ನೂ ನಂಬಲಾಗದಂತೆ ಆತಂಕ ಕವಿದಿದೆ. ಕೃಷಿ, ಕೈಗಾರಿಕೆ, ಮೀನುಗಾರಿಕೆ, ಶಿಕ್ಷಣ, ವೈದ್ಯಕೀಯ ಮತ್ತಿತರ ಕ್ಷೇತ್ರಗಳಲ್ಲಿ ಮೇಲೇರುತ್ತಲೇ ಇರುವ ನಾಡು ನಮ್ಮದು ಆದರೆ ಮನುಷ್ಯ ಮನಸ್ಸುಗಳ ನಡುವಿನ ಅಂತರ ಹೆಚ್ಚಾಗುತ್ತಿದೆ. ಜಾತಿ ಮತ ಪಥ ಪಂಥ ಪಕ್ಷ ಪಂಗಡಗಳ ಹೆಸರಿನಲ್ಲಿ ಪರಸ್ಪರ ಮಾಂಸ ಕೀಳುವ, ರಕ್ತ ಹರಿಸುವ, ಒಬ್ಬರನ್ನೊಬ್ಬರು ಕೊಲ್ಲುವ ತನಕ ವೈರ, ವಿದ್ವೇಷಗಳು ಮಿತಿ ಮೀರಿವೆ. ಇದಕ್ಕೆಲ್ಲ ಇತಿಶ್ರೀ ಹಾಡುವುದು ಇಂದಿನ ತುರ್ತು ಅಗತ್ಯವಾಗಿದೆ. ಜಾತಿ ಮತ ಪಥಗಳು ಭಿನ್ನವಾದರೂ ಎಲ್ಲರನ್ನೂ ಮನುಷ್ಯರನ್ನಾಗಿ ಕಾಣುವ ಹೃದಯವಂತಿಕೆ ಬಹಳ ಮುಖ್ಯ.

ಒಬ್ಬರನ್ನೊಬ್ಬರು ಅರಿತು, ಬೆರೆತು ಬದುಕಿದರೆ ಮಾತ್ರ ಸ್ವಸ್ಥ ಜೀವನ ಸಾಧ್ಯ. ಈ ಸಂದೇಶವನ್ನು ಸಮಾಜದ ಮುಂದೆ ಪ್ರಬಲವಾಗಿ ಪ್ರತಿಪಾದಿಸುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ’ (ಎಸ್ ವೈ ಎಸ್) ವು ವಿಶಿಷ್ಟ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ ಎಂದು ಸೌಹಾರ್ದ ಸಂಚಾರ ಸಮಿತಿಯ ಅಧ್ಯಕ್ಷರಾದ ಅಡ್ವಕೇಟ್ ಹಂಝತ್ ಹೆಜಮಾಡಿಯವರು ಹೇಳಿದರು

ಇಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುದ್ಧಿವಂತರ ಜಿಲ್ಲೆ ಎಂದು ಹೆಸರುವಾಸಿಯಾದ ಕರಾವಳಿ ಕರ್ನಾಟಕದ ಇತ್ತೀಚಿನ ಬೆಳವಣಿಗೆಗಳು ತೀರಾ ಆತಂಕಕಾರಿಯಾಗಿದೆ ಅದ್ದರಿಂದ ”ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ‘ಕರಾವಳಿಯ ನೆಲದಲ್ಲಿ ಸೌಹಾರ್ದ ಸಂಚಾರ’ ಎಂಬ ಕಾರ್ಯಕ್ರಮವು ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ ಎಂದು ಹೇಳಿದರು.

Advertisements

ಜುಲೈ 14ರ ಸೋಮವಾರ ಬೆಳಿಗೆ, 8 ಗಂಟೆಗೆ ಕುಂದಾಪುರ ಅನ್ವಯಿದ್ ಯೂಸುಫ್ ವಲಿಯುಲ್ಲಾಹಿ ರವರ ದರ್ಗಾ ಝಿಯಾರತ್ ನೊಂದಿಗೆ ಆರಂಭವಾಗುವ ಸೌಹಾರ್ದ ಸಂಚಾರವು ಬೆಳಿಗ್ಗೆ 9 ಗಂಟೆಗೆ ಕುಂದಾಪುರ ದರ್ಗಾದಿಂದ ಶಾಸ್ತ್ರಿ ಸರ್ಕಲ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾ ಹಾಗೂ ನಂತರ ಸೌಹಾರ್ದ ಸಂದೇಶ ಕಾರ್ಯಕ್ರಮ ನಡೆಯಲಿದೆ

ಮಧ್ಯಾಹ್ನ 12 ಗಂಟೆಗೆ ಉಡುಪಿ ಜಾಮಿಯಾ ಮಸೀದಿಯಿಂದ ಮದರ್ ಆಫ್ ಸೋರೋಸ್ ಚರ್ಚ್ ತನಕ ಕಾಲ್ನಡಿಗೆ ಜಾಥಾ ಹಾಗೂ ಸೌಹಾರ್ದ ಸಂದೇಶ ನಡೆಯಲಿದೆ

ಮಧ್ಯಾಹ್ನ 3.30 ಗಂಟೆಗೆ ಕಾರ್ಕಳ ಗ್ಯಾಲಕ್ಕಿ ಹಾಲ್ ನಿಂದ ಬಸ್ಸು ನಿಲ್ದಾಣದವರೆಗೆ ಕಾಲ್ನಡಿಗೆ ಜಾಥಾ ಹಾಗೂ ಸೌಹಾರ್ದ ಸಂದೇಶ ನಡೆಯಲಿದೆ. ಸಂಜೆ 5:30 ಗಂಟೆಗೆ ಕಾಪು ಪೊಲಿವು ಜಾಮಿಯಾ ಮಸೀದಿಯಿಂದ ಕಾವು ಪೇಟೆ ತನಕ ಸೌಹಾರ್ದ ನಡಿಗೆ ಹಾಗೂ ಸಂದೇಶ ಭಾಷಣ ನಡೆಯಲಿದೆ. ರಾತ್ರಿ 8 ಗಂಟೆಗೆ ಪಡುಬಿದ್ರಿ ಪೇಟೆಯಲ್ಲಿ ಸೌಹಾರ್ದ ಭಾಷಣ ನಡೆಯಲಿದೆ ಎಂದು ಹೇಳಿದರು.

ಈ ಸೌಹಾರ್ದ ಸಂಚಾರದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಫಾದರ್ ಗಳು ಮುಸ್ಲಿಂ ಧಾರ್ಮಿಕ ವಿದ್ವಾಂಸರು, ಸಾಮಾಜಿಕ ಶೈಕ್ಷಣಿಕ ಹಾಗೂ ಇನ್ನಿತರ ಪ್ರಮುಖ ನಾಯಕರುಗಳು ಭಾಗವಹಿಸಲಿರುವರು ಎಂದು ಹೇಳಿದರು.

1006175855

ಪತ್ರಿಕಾಗೋಷ್ಠಿಯಲ್ಲಿ ಸೌಹಾರ್ದ ಸಂಚಾರ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಅಡ್ವಕೇಟ್ ಹಬೀಬ್ ಅಲಿ, ಎಸ್ ವೈ ಎಸ್ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಮ್ ಸಲೀಂ ಪಕೀರ್ಣಕಟ್ಟೆ, ಜಿಲ್ಲಾ ಉಪಾಧ್ಯಕ್ಷರಾದ ಹುಸೈನ್ ಸ ಅದಿ ಹೊಸ್ಮಾರು, ಮಾಧ್ಯಮ ಕಾರ್ಯದರ್ಶಿ ಹಾರಿಸ್ ಹೆಮ್ಮಾಡಿ, ಸ್ವಾಗತ ಸಮಿತಿಯ ಕನ್ವೀನರ್ ಇಂತಿಯಾಝ್ ಹೊನ್ನಾಳ, ಎಸ್ ವೈ ಎಸ್ ಉಡುಪಿ ಝೋನ್ ಕಾರ್ಯದರ್ಶಿ ತೌಫೀಖ್ ಅಂಬಾಗಿಲು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X