ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೊಷಿಸಿದೆ.
“ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮತತು ಮಧ್ಯಮ ಪ್ರಮಾಣದ ಮಳೆ ಬೀಳಲಿದೆ” ಎಂದು ಇಲಾಖೆ ತಿಳಿಸಿದೆ.
ಇಲಾಖೆ ಹೇಳುವಂತೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‘ ಘೋಷಿಸಲಾಗಿದೆ.
ಇನ್ನು – ಬೆಂಗಳೂರು ನಗರ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಾವಣೆಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ವಿವರಿಸಿದೆ.
ಮುಂಗಾರು ಮಳೆ ಇನ್ನೂ ಕೆಲವು ದಿನ ತನ್ನ ಅಬ್ಬರವನ್ನು ಹೆಚ್ಚಿಸಲಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸಲಿದೆ ಎಂದು ಇಲಾಖೆ ಹೇಳಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಅಂತೆಯೇ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆ ಸುರಿದಿದೆ.