ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಇಂದು ಉಡುಪಿ, ಕುಂದಾಪುರ ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಂದೇ ದಿನದಲ್ಲಿ ಒಟ್ಟು 48,122 ಪ್ರಕರಣಗಳನ್ನು ಇತ್ಯರ್ಥ ಗೊಳಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ಕಿರಣ್ ಗಂಗಣ್ಣನವರ್ ತಿಳಿಸಿದ್ದಾರೆ.
ದಿನದಲ್ಲಿ ಇತ್ಯರ್ಥಗೊಂಡಿರುವ 48,122 ಪ್ರಕರಣಗಳಲ್ಲಿ ರಾಜೀಯಾಗ ಬಲ್ಲ ಅಪರಾಧಿಕ ಪ್ರಕರಣ- 44, ಚೆಕ್ಕು ಅಮಾನ್ಯ ಪ್ರಕರಣ-248, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ- 8, ಎಂ.ವಿ.ಸಿ ಪ್ರಕರಣ-135, ವೈವಾಹಿಕ ಪ್ರಕರಣ-4, ಸಿವಿಲ್ ಪ್ರಕರಣ-250, ಇತರೇ ಕ್ರಿಮಿನಲ್ ಪ್ರಕರಣ-3211, ಕಾರ್ಮಿಕ ವ್ಯಾಜ್ಯ -1, ಭೂಸ್ವಾಧೀನ ವ್ಯಾಜ್ಯಗಳು- 2, ಎಂಎಂಆರ್‌ಡಿ- 6 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು- 44,213 ಇವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಎಲ್ಲಾ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ಒಟ್ಟಾರೆಯಾಗಿ 25,64,48,586ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು ಎಂದು ನ್ಯಾ.ಕಿರಣ್ ಗಂಗಣ್ಣನವರ್ ತಿಳಿಸಿದ್ದಾರೆ.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಗಳ ಸಂಪೂರ್ಣ ಸಹಕಾರ ದೊಂದಿಗೆ ಲೋಕ್ ಅದಾಲತ್‌ನ್ನು ಯಶಸ್ವಿಗೊಳಿಸಲಾಯಿತು ಎಂದೂ ಅವರು ತಿಳಿಸಿದ್ದಾರೆ.