2022-23ನೇ ಸಾಲಿನಲ್ಲಿ ಪದವಿ ಪೂರೈಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರಬೇಕಾದ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸಂಸದ ಸಾಗರ ಖಂಡ್ರೆ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.
ಈ ಹಿಂದೆ ಪರಿಶಿಷ್ಟಜಾತಿ ಹಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಈ ಹಿಂದೆ ಶಿಷ್ಯವೇತನ ನೀಡಲಾಗುತ್ತಿತ್ತು. ಈಗ ಸ್ಥಗಿತಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮೊದಲಿನಂತೆ ಪುನಾರಂಭಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ : ಬೀದರ್ | ಕಾಡು ಹಂದಿ, ಜಿಂಕೆಗಳ ಕಾಟ : ಬೆಳೆ ರಕ್ಷಣೆಗೆ ಸೀರೆ, ಸೋಲಾರ್ ಮೊರೆ ಹೋದ ರೈತರು!
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲೂಕು ಸಂಚಾಲಕ ಮಹಾದೇವ ಮದಕಟ್ಟಿ, ಸಹ ಸಂಚಾಲಕ ರವಿ ಭಾವಿದೊಡ್ಡೆ ಹಾಗೂ ಕರಣ, ಅಭಿಷೇಕ, ಪ್ರದೀಪ, ಸೋಮನಾಥ, ಅಮುಲ್ ಮತ್ತಿತರರು ಹಾಜರಿದ್ದರು.