ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ
ಮೂವರು ಯುವಕರು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದಿದ್ದರು. ಈ ವೇಳೆ ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಹಾಗೂ ಈಜುಗಾರರ ತಂಡ ಯುವಕರಿಗಾಗಿ ಶೋಧಕಾರ್ಯ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
