ಮಣಿಪುರ | ಲೋಕಸಭೆಯಲ್ಲಿ ವಿಪಕ್ಷಗಳ ಪ್ರತಿಭಟನೆ: ಆಗ ಮೈಕ್ ಕಿತ್ತರು, ಈಗ ಕ್ಯಾಮರಾ ತಿರುಗಿಸಿದರು!

Date:

Advertisements

ಕಳೆದ ಜುಲೈ 20ರಂದು ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆಗೆ ಅವಕಾಶ ನೀಡಬೇಕು ಎಂಬ ಪ್ರತಿಪಕ್ಷಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೇ, ಪ್ರತಿಭಟನೆ ನಡೆಸುತ್ತಾ ಲೋಕಸಭೆಯ ಕಲಾಪದಲ್ಲಿ ಆಗ್ರಹಪಡಿಸುತ್ತಲೇ ಇವೆ. ಆದರೆ ಈವರೆಗೂ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಿಲ್ಲ. ಬದಲಿಗೆ ದೇಶದ ನಾನಾ ರಾಜ್ಯಗಳಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಇಂದು ಕೂಡ ಲೋಕಸಭೆಯಲ್ಲಿ ವಿಪಕ್ಷಗಳ ಸದಸ್ಯರು ಮಣಿಪುರ ವಿಚಾರ ಉಲ್ಲೇಖಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಮಧ್ಯೆ ವಿಪಕ್ಷಗಳ ಪ್ರತಿಭಟನೆಯ ದೃಶ್ಯಗಳು ಕ್ಯಾಮರಾಗಳಲ್ಲಿ ದಾಖಲಾಗದಂತೆ ಬೇರೆ ಬೇರೆ ಕಡೆ ಹಾಗೂ ಝೂಮ್ ಮಾಡಿ ತಿರುಗಿಸಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

“ಇದು ಇಂದು ನಡೆದ ಲೋಕಸಭೆಯ ಅಧಿವೇಶನ. ಮಣಿಪುರದಲ್ಲಿ 90ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಿಂದ ಜನರು ನರಳುತ್ತಿದ್ದಾರೆ. ಮಣಿಪುರದಲ್ಲಿ ಬಿಜೆಪಿ ಸರ್ಕಾರವಿದೆ. ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಬಯಸಿದ್ದವು. ಅದಕ್ಕೆ ಸರ್ಕಾರ ಸಿದ್ಧವಿಲ್ಲ. ಪ್ರತಿಪಕ್ಷಗಳು ಮಣಿಪುರದ ಬಗ್ಗೆ ಹಿಡಿದಿರುವ ಫಲಕಗಳು ವೀಕ್ಷಕರಿಗೆ ಕಾಣದಂತೆ ಕ್ಯಾಮರಾ ತಿರುಗಿಸುವ ದೃಶ್ಯ ನೋಡಿ. ಈ ಸರ್ಕಾರಕ್ಕೆ ಭಯ ಕಾಡತೊಡಗಿದೆ’ ಎಂದು ನೆಟ್ಟಿಗರೊಬ್ಬರು ವಿಡಿಯೋವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

Advertisements

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಮಾತನಾಡುವ ವೇಳೆ ಸೆರೆಯಾಗಿರುವ ಈ ದೃಶ್ಯದಲ್ಲಿ ‘ಇಂಡಿಯಾ ಫಾರ್ ಮಣಿಪುರ್’ ಎಂಬ ಭಿತ್ತಿಪತ್ರಗಳನ್ನು ವಿಪಕ್ಷಗಳ ಸದಸ್ಯರು ಇಟ್ಟುಕೊಂಡಿದ್ದರು. ಈ ದೃಶ್ಯಗಳು ಸೆರೆಯಾಗದಂತೆ ಝೂಮ್ ಮಾಡುವುದು ಮತ್ತು ಬೇರೆ ಬೇರೆ ‘ಕ್ಯಾಮರಾ ಆ್ಯಂಗಲ್’ಗಳನ್ನು ಪ್ರಸಾರ ಮಾಡುವುದನ್ನು ವಿಡಿಯೋದಲ್ಲಿ ಗಮನಿಸಬಹುದು.

ಮಣಿಪುರದ ವಿಚಾರವನ್ನು ಪ್ರಸ್ತಾಪಿಸಿ ಕಳೆದ ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಲಾಗಿತ್ತು. ಇದನ್ನು ಪ್ರತಿಭಟಿಸಿ ವಿಪಕ್ಷಗಳು ಸಭಾತ್ಯಾಗ ಕೂಡ ಮಾಡಿದ್ದವು.

ಈ ಬಗ್ಗೆ ರಾಜ್ಯಸಭೆಯಲ್ಲೇ ಮಾತನಾಡಿದ್ದ ಖರ್ಗೆ, ‘ಮೈಕ್ ಆಫ್ ಮಾಡುವ ಮೂಲಕ ನನ್ನ ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ. ಅವಮಾನ ಮಾಡಲಾಗಿದೆ’ ಎಂದು ಖಂಡಿಸಿದ್ದರು.

ಆಗ ಮೈಕ್, ಈಗ ಕ್ಯಾಮರಾ- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X