ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಯು, ಕಮಲನಗರ ತಾಲೂಕಿನ ಚಿಕ್ಕಿ(ಯು) ತಾಂಡಾದ ನಿವಾಸಿ. ಔರಾದ್ ಪಟ್ಟಣದ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ಬೀದರ್ | ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿಗೆ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಆಯ್ಕೆ