ಮಗುವನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯನ್ನು ಗಮನಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಗುವನ್ನು ರಕ್ಷಿಸಿದ್ದಾರೆ.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ, ಮಗು ಬಿಕ್ಷೆ ಬೇಡುತ್ತಿರುವುದು ಜಿಲ್ಲಾಧಿಕಾರಿ ಅವರು ಗಮನಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಧಿಕಾರಿಗಳು ಮಹಿಳೆಯ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.
ಬಳಿಕ ವಿಚಾರಣೆ ನಡೆಸಿದಾಗ ಮಹಿಳೆ ಭಿಕ್ಷಾಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ರಕ್ಷಿಸಿದ ಮಗುವನ್ನು ಬ್ರಿಮ್ಸ್ ಮಕ್ಕಳ ಘಟಕಕ್ಕೆ ದಾಖಲಿಸಲಾಯಿತು.