ಉಡುಪಿ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಪೋಕ್ಸೋ ಪ್ರಕರಣದ ಆರೋಪಿ, ಆಸ್ಪತ್ರೆಗೆ ದಾಖಲು

Date:

Advertisements

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಉಡುಪಿಯ ಮಣಿಪಾಲದ ಬಳಿ ನಡೆದಿದೆ.

ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಳೆದ ಜೂನ್‌ 08 ರಂದು ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಂಜೆ ಆರೋಪಿತನಾದ ಮೊಹಮ್ಮದ್ ದಾನೀಶ್ (29) ಎಂಬವವನ್ನು ಪೊಲೀಸರು ದಸ್ತಗಿರಿ ಮಾಡಿದ್ದರು. ಆತನನ್ನು ತನಿಖೆಗೆ ಒಳಪಡಿಸಿ ಇಂದು ತನಿಖೆಯ ಬಗ್ಗೆ ಉಡುಪಿ ಬಡಗುಬೆಟ್ಟು ಗ್ರಾಮದ ಮಣಿಪಾಲ, ತಾಂಗೋಡು 2ನೇ ಕ್ರಾಸ್ ಹಾಡಿ ಬಳಿಯಲ್ಲಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಸಮಯದಲ್ಲಿ ಆರೋಪಿ ಮೊಹಮ್ಮದ್ ದ್ಯಾನೀಶ್ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಪಿಸಿ ರಿತೇಶ್ ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಲ್ಯಾಟ್ರೇಟ್ ಸೈಜ್ ನ ಕಲ್ಲನ್ನು ಪಿಸಿ ರಿತೇಶ್ ರವರ ಮೇಲೆ ಎತ್ತಿಹಾಕಲು ಬಂದಿದ್ದಾನೆ. ಆಗ ಪೊಲೀಸ್ ನಿರೀಕ್ಷಕರರಾದ ರಾಮಚಂದ್ರ ನಾಯಕ್ ತಡೆದಾಗ ಅವರ ಮೇಲು ಎಸೆಯಲು ಪ್ರಯತ್ನಿಸಿದ್ದಾನೆ. ಆ ಸಮಯ ಲಾಠಿಯಿಂದ ಆತನ ಕಾಲಿಗೆ ಹೊಡೆದು, ಅವನನ್ನು ನಿಯಂತ್ರಿಸಿದ್ದು, ಉಳಿದ ಪೊಲೀಸ್ ಸಿಬ್ಬಂದಿಗಳು ಆತನನ್ನು ಹಿಡಿದಿದ್ದಾರೆ.

1006196126

ಈ ಪ್ರಕರಣದಲ್ಲಿ ಗಾಯಗೊಂಡ ಸಿಬ್ಬಂದಿ ಪಿಸಿ ರಿತೇಶ್ ಹಾಗೂ ಆರೋಪಿ ಮೊಹಮ್ಮದ್ ಡಾನೀಶ್ ರವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X