ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳೆದ ಹದಿನೆಂಟು ವರ್ಷಗಳಿಂದ ಬೆಂಗಳೂರಿನ ಅವಿರತ ಟ್ರಸ್ಟ್ ರಾಜ್ಯದ ನಾನಾ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಪ್ರತಿವರ್ಷ ನೋಟ್ ಪುಸ್ತಕಗಳನ್ನು ಪೂರೈಸಿ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದೇವೆ’ ಎಂದರು.
ಚಿಂತಕ ದಿಲೀಪ ಚಂದಾ ಮಾತನಾಡಿ, ‘ಬಸವಾದಿ ಶರಣರ ದಾಸೋಹ ತತ್ವದಿಂದ ಅವಿರತ ಟ್ರಸ್ಟ್ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರಿ ಶಾಲೆಯಲ್ಲಿ ಓದುವುದು ಮಕ್ಕಳು ಕೀಳರಿಮೆ ಪಡದೆ ಉನ್ನತ ಗುರಿ ತಲುಪಲು ಪ್ರಯತ್ನಿಸಬೇಕು’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಶಿವಪುತ್ರ ಮುಕ್ರಂಬೆ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರ, ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಿದೆ. ಸ್ವಂತ ಹಣದಲ್ಲಿ ಉಚಿತವಾಗಿ ನೋಟ್ ಬುಕ್ ವಿತರಿಸುವ ಅವಿರತ ಟ್ರಸ್ಟ್ ಕಾರ್ಯ ಶ್ಲಾಘನೀಯ ‘ ಎಂದು ನುಡಿದರು.

ಸಾಮಾಜಿಕ ಕಾರ್ಯಕರ್ತರಾದ ವಿನೋದ್ ರತ್ನಾಕರ್, ಸುಭಾಷ ಲಾಧಾ, ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅವಿರತ ಟ್ರಸ್ಟ್ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಲಾಯಿತು. ಶಾಲೆಯ ಹಳೆ ವಿದ್ಯಾರ್ಥಿ ರಾಜಕುಮಾರ ಮೇತ್ರೆ ಅವರು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ ಮಾಡಿದರು.
ಇದನ್ನೂ ಓದಿ : ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ
ಎಸ್‌ಡಿಎಂಸಿ ಅಧ್ಯಕ್ಷ ಶರಣಬಸವ ಚಿದ್ರೆ, ಗ್ರಾಮದ ಪ್ರಮುಖರಾದ ವಿಜಯಕುಮಾರ್ ಪಾಟೀಲ್, ಸತೀಶ್, ಸಂಗೀತಾ, ಮೀನಾಕ್ಷಿ, ಭಾಗ್ಯಶ್ರೀ, ಸಿದ್ರಾಮ್ ಪಾಟೀಲ್, ಈಶ್ವರ್ ಸ್ವಾಮಿ, ನಾಗಯ್ಯ ಸ್ವಾಮಿ, ಸಂತೋಷ್ ಚ್ಯಾರೆ, ಕೈಲಾಸ ಸ್ವಾಮಿ, ಶಿವು ಕೋಳಿ, ಭಗವಂತ, ಶಿಕ್ಷಕರಾದ ಸಂತೋಷ್, ಮಮತಾಜ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಅವಿರತ ಟ್ರಸ್ಟ್‌ನ ವೆಂಕಟ ಚಿಟ್ಟಾ, ಸಕ್ಪಾಲ್ ಕಾಂಬಳೆ ಪ್ರಾರ್ಥನೆ ನಡೆಸಿಕೊಟ್ಟರು. ಶಿಕ್ಷಕ ಬಸವರಾಜ ಪಾಂಚಾಳ ಸ್ವಾಗತಿಸಿದರು. ನವನಾಥ ನಿರೂಪಿಸಿ, ವಂದಿಸಿದರು.