ಸಿಗಂದೂರು ಸೇತುವೆ | ಶಿಷ್ಟಾಚಾರ ಉಲ್ಲಂಘನೆ, ಕಾರ್ಯಕ್ರಮದಿಂದ ದೂರ ಉಳಿದ ರಾಜ್ಯ ಸರ್ಕಾರ

Date:

Advertisements

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಸಿಎಂ, “ಇಂದು ಆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ ಯಾರು ಕೂಡಾ ಭಾಗಿಯಾಗುತ್ತಿಲ್ಲ. ನಾನೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಫೋನ್ ಮಾಡಿ ಬೇರೆ ದಿನ ನಿಗದಿ ಮಾಡುವಂತೆ ಕೇಳಿಕೊಂಡಿದ್ದೆ. ಬಳಿಕ ಪತ್ರವನ್ನು ಬರೆದಿದ್ದೆ. ಅದಕ್ಕೆ ಗಡ್ಕರಿ ಅವರು ಕಾರ್ಯಕ್ರಮ ಮುಂದಕ್ಕೆ ಹಾಕೋದಾಗಿ ಹೇಳಿದರು. ಆದರೆ ಇಲ್ಲಿನ ಬಿಜೆಪಿ ನಾಯಕರು ಅವರಿಗೆ ಒತ್ತಡ ಹಾಕಿರಬಹುದು ಅನ್ನಿಸುತ್ತೆ. ಅವರು ನನಗೆ ಏನು ಹೇಳದೇ ಮಾಡುತ್ತಿದೆ” ಎಂದು ಕಿಡಿಕಾರಿದರು.

“ನಾನು ಮೊದಲೇ ನಿಗದಿಯಾಗಿರುವ ಇಂಡಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಪ್ರತಿಭಟನಾರ್ಥವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಯಾರು ಹೋಗುತ್ತಿಲ್ಲ. ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಸಾಗರ ಶಾಸಕರು ಹೋಗ್ತಿಲ್ಲ.ಕೇಂದ್ರ ಸರ್ಕಾರದವರು ಕರೆಯಬೇಕಿತ್ತು. ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಶಿಷ್ಟಾಚಾರ ಪಾಲನೆ ಮಾಡದೇ ಉಲ್ಲಂಘನೆ ಮಾಡಿದ್ದಾರೆ” ಎಂದು ಆಕ್ರೋಶ ಹೊರ ಹಾಕಿದರು.

ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಗೈರಾದ ಹಿನ್ನೆಲೆ ಎಕ್ಸ್ ಖಾತೆಯಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ. ಇಂದಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧಾಮಯ್ಯರಿಗೆ ಮೊದಲೇ ಅಧಿಕೃತ ಆಹ್ವಾನ ಕೊಡಲಾಗಿತ್ತು ಎಂದು ಬರೆದಿದ್ದಾರೆ.

ಭೌತಿಕವಾಗಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಜೂನ್ 11 ರಂದು ಆಹ್ವಾನ ಕೊಡಲಾಗಿದೆ. ಅಲ್ಲದೇ ಬರಲು ಸಾಧ್ಯವಾಗದಿದ್ರೆ ವರ್ಚುವಲ್ ಮೂಲಕವಾದ್ರೂ ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೂನ್ 12 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಹ್ವಾನಿಸಿದ್ದೆವು ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಜಾ 1

ಸಾಗರಕ್ಕೆ ಬಂದು ವಾಪಸ್‌ ಆದ ಸಚಿವ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಾಗರ ಪಟ್ಟಣಕ್ಕೆ ಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ವಾಪಸ್‌ ಮರಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X