ಮಂಗಳೂರು ನಗರದ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಮತಿ ಪಡೆಯದೆಯೇ ಡಿಜೆ ಬಳಕೆ ಮಾಡಿದ್ದು, ಬಳಸಿದವರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಶೋಕ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಡಿಜೆ ಬಳಸಿ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿರುವ ಬಗ್ಗೆ ರಾತ್ರಿ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರು ಬಂದ ಹಿನ್ನೆಲೆ ಉರ್ವ ಠಾಣೆಯ ಹೊಯ್ಸಳ ವಾಹನದ ಸಿಬ್ಬಂದಿ ರಾತ್ರಿ 10.52ಕ್ಕೆ ಸ್ಥಳಕ್ಕೆ ಭೇಟಿಕ್ಕೆ ನೀಡಿದ ಸಂದರ್ಭದಲ್ಲಿ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಲ್ಲಿ ಧ್ವನಿವರ್ಧಕ ಬಳಸಲಾಗುತ್ತಿತ್ತು. ಅಪಾರ್ಟ್‌ಮೆಂಟ್‌ನ ಮಾಲೀಕ ದಿಲೀಪ್ ಹಾಗೂ ಕಾರ್ಯಕ್ರಮ ನಿರ್ವಹಿಸುವ ಕಂಪನಿ (ಅಭಿಜ್ಞಾ) ಡಿಜೆ ಬಳಕೆಗೆ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಬಳಕೆ ಮಾಡುತ್ತಿದ್ದರು.
ಇದನ್ನೂ ಓದಿ: ಮಂಗಳೂರು | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ
ಅನಗತ್ಯ ಶಬ್ದ ಮಾಲಿನ್ಯ ಮಾಡಿ, ಸುತ್ತ-ಮುತ್ತಲಿನ ನಿವಾಸಿಗಳಿಗೆ ತೊಂದರೆ ನೀಡುತ್ತಿರುವ ಕುರಿತು ಹೊಯ್ಸಳ ಸಿಬ್ಬಂದಿ ಮಾಹಿತಿ ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.