ಧರ್ಮದ ಹೆಸರಲ್ಲಿ ಜನರು ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ : ಮಲ್ಲಿಕಾರ್ಜುನ ಖರ್ಗೆ

Date:

Advertisements
  • ಹಿಂದಿಯಲ್ಲಿ ಟ್ವೀಟ್ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
  • ‘ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ’

‘ಧರ್ಮದ ಹೆಸರಲ್ಲಿ ಜನರು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ನಾನಾ ಹಿಂಸಾತ್ಮಕ ಘಟನೆಗಳ ಹಿನ್ನೆಲೆಯಲ್ಲಿ ಮಂಗಳವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಹರಿಯಾಣದ ಕೆಲವೆಡೆ ನಡೆಯುತ್ತಿರುವ ಘಟನೆಗಳಾಗಲಿ ಅಥವಾ ಆರ್‌ಪಿಎಫ್‌ ಯೋಧ ರೈಲಿನಲ್ಲಿ ಗುಂಡಿಟ್ಟು ಕೊಂದ ಕೃತ್ಯಗಳೆಲ್ಲವೂ ಭಾರತ ಮಾತೆಯ ಹೃದಯದಲ್ಲಿ ಆಳವಾದ ಗಾಯ ಮಾಡುತ್ತಿವೆ’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

‘ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗಬೇಕಿದೆ. ಒಂದು ವೇಳೆ ಒಂದಾಗದೇ ಇದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

Advertisements

‘ನಫ್ರತ್ ಚೋಡೋ; ಭಾರತ್ ಜೋಡೋ'(ದ್ವೇಷ ಬಿಡಿ; ಭಾರತ ಒಗ್ಗೂಡಿಸಿ) ಎಂದು ಮನವಿ ಮಾಡಿರುವ ಖರ್ಗೆ, ಹಿಂಸಾಚಾರದ ಘಟನೆಗಳ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ದುರ್ಬಲ ಕಾನೂನು-ಸುವ್ಯವಸ್ಥೆ ಹಾಗೂ ದುರ್ಬಲ ಸಾಂವಿಧಾನಿಕ ಸಂಸ್ಥೆಗಳ ಕುರಿತು ಎಲ್ಲ ಘಟನೆಗಳು ಗಂಭೀರ ಪ್ರಶ್ನೆಗಳನ್ನು ಎತ್ತುತ್ತವೆ. ದೇಶದಲ್ಲಿ ಅಧಿಕಾರದ ದಾಹದ ಉದ್ದೇಶಕ್ಕಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿಯೇ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X