ಕೊಪ್ಪಳ | ಐತಿಹಾಸಿಕ ಸಾಧನೆಗೆ ಶಕ್ತಿ ಯೋಜನೆ ಸಾಕ್ಷಿ: ಶಾಸಕ ರಾಘವೇಂದ್ರ ಹಿಟ್ನಾಳ

Date:

Advertisements

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದಿಂದ ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಿ ಶುಭಾಶಯ ಕೋರಿದರು.

“ನಮ್ಮ ಸರ್ಕಾರವು ಯಶಸ್ವಿಯಾಗಿ 2 ವರ್ಷಗಳನ್ನು ಪೂರ್ಣಗೊಳಿಸಿದ್ದು, ಜನಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಮಹಿಳೆಯರು, ನಿರುದ್ಯೋಗಿ ಯುವಜನತೆ ಹಾಗೂ ವಿಶೇಷವಾಗಿ ಬಡ ಜನರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲೊಂದಾದ ಶಕ್ತಿ ಯೋಜನೆಯಡಿ ಇಲ್ಲಿವಯರೆಗೆ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಾಯಾಣವನ್ನು ಮಾಡಿದ್ದು, ಇದೊಂದು ದೇಶದಲ್ಲಿಯೇ ಬಹುದೊಡ್ಡ ಕಾರ್ಯಕ್ರಮವಾಗಿದೆ” ಎಂದು ಶಾಸಕ ಮಂಜುನಾಥ್‌ ಮೆಚ್ಚಗೆ ವ್ಯಕ್ತಪಡಿಸಿದರು.

Advertisements
WhatsApp Image 2025 07 14 at 5.42.20 PM

“ಮಹಿಳೆಯರಿಗೆ ಸ್ವಂತ ಶಕ್ತಿ ಮೇಲೆ ಕುಟುಂಬವನ್ನು ನಡೆಸಲು ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ 2000 ರೂ.ಗಳ ಸಹಾಯಧನ ಹಾಗೂ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ನಮ್ಮ ಸರ್ಕಾರ ಮಾಡಿಕೊಟ್ಟಿದೆ. ಇದರ ಜೊತೆಗೆ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ಉಚಿತ್ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜೆ ಅಕ್ಕಿ ವಿತರಣೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವುದರ ಮೂಲಕ ಎಲ್ಲರಿಗೂ ಆರ್ಥಿಕವಾಗಿ ಶಕ್ತಿ ತುಂಬಿದೆ. ಈ ಐದು ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ಬಡವರಿಗೂ ತಲುಪಿಸುವಂತಹ ಕೆಲಸ ನಮ್ಮ ಸರ್ಕಾರದಿಂದಾಗಿದೆ. ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಐದು ವರ್ಷಗಳ ಕಾಲವೂ ಜಾರಿ ಮಾಡುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಆರೋಪಿಗಳ ಕಠಿಣ ಶಿಕ್ಷೆಗೆ ಆಗ್ರಹ

ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ, “ಇಂತಹ ಯೋಜನೆಯು ನಮ್ಮ ದೇಶದ ಯಾವ ರಾಜ್ಯದಲ್ಲಿಯೂ ಇಲ್ಲ. ಈ ಯೋಜನೆಗೆ ಬಹಳಷ್ಟು ಮಹಿಳೆಯರು ಸ್ವಾಗತಿಸಿ, ನಮ್ಮ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳ ಬಸ್ ನಿಲ್ದಾಣದಲ್ಲಿ ಬಸ್‌ಗೆ ಪೂಜೆ ಮಾಡಿ, ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಬೇಕೆಂದು ಸರ್ಕಾರವು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿಯೂ ಬಸ್‌ಗೆ ಪೂಜೆ ಸಲ್ಲಿಸಿ ಹಾಗೂ ಮಹಿಳೆಯರಿಗೆ ಸಿಹಿ ಹಂಚಿ ಅಭಿನಂದಿಸಲಾಗಿದೆ” ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಹಿಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ ಕಲಬುರಗಿಯ ಮುಖ್ಯ ಯೋಜನಾ ಮತ್ತು ಸಾಂಖಿಕ ಅಧಿಕಾರಿಗಳು ಹಾಗೂ ಕೊಪ್ಪಳ ವಿಭಾಗದ ಉಸ್ತುವಾರಿ ಅಧಿಕಾರಿ ಎಂ.ಆರ್. ಮುಂಜಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X