ಹಾವೇರಿ | ಮಣಿಪುರ ಸರ್ಕಾರವನ್ನು ವಜಾಗೊಳಿಸಿ: ಸಂಘಟನೆಗಳ ಆಗ್ರಹ

Date:

Advertisements

ಮಣಿಪುರದಲ್ಲಿ ಕಾನೂನು‌-ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಪ್ರತಿಭಟನೆ ನಡೆಸಿದ ಹಾನಗಲ್ ತಾಲೂಕು ಆದರ್ಶ ಮಹಿಳಾ ಒಕ್ಕೂಟ ಮತ್ತು ಪ್ರಗತಿ ಮಹಿಳಾ ಒಕ್ಕೂಟ, ಮಹಿಳಾ ನ್ಯಾಯವಾದಿಗಳು, ಜನವೇದಿಕೆ, ಮಾನವ ಹಕ್ಕು ಸಮಿತಿ, ಪುಟ್ಟರಾಜ ಯೂನಿಯನ್, ರೈತ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ, “ಹೆಣ್ಣು ಜನನದ ಮೂಲ, ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತ ಮೇಲೆ ಎಂದು ಕೇವಲ ಭಾಷಣಗಳಲ್ಲಿ ಮಾತನಾಡುವ ನಮ್ಮ ನಾಯಕರು ನಮ್ಮ ದೇಶದ ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಬಲತ್ಕಾರ, ಅಮಾನುಷ್ಯ ಹಿಂಸಾಚಾರಗಳು ನಡೆದರೂ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ನಮ್ಮ ದುರಾದೃಷ್ಟದ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಭಾರತದ ಸಂಸ್ಕೃತಿ ಆಚಾರ-ವಿಚಾರಗಳ ಬಗ್ಗೆ ಪಾಶ್ಚಿಮಾತ್ಯ ದೇಶಗಳು ಅಧ್ಯಯನ ಮಾಡಲು ಹೆಮ್ಮೆ ಪಡುತ್ತವೆ. ಆದರೆ ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮರವಣಿಗೆ ಅದರಲ್ಲೂ ದೇಶ ಕಾಯುವ ಯೋಧರೊಬ್ಬರ ಪತ್ನಿಮೇಲೆ ಅತ್ಯಾಚಾರ ಮಾಡಿ ದೌರ್ಜನ್ಯ ಎಸಗಿರುವುದು ಎಲ್ಲ ನಾಗರಿಕರು ತಲೆತಗ್ಗಿಸುವಂತಾಗಿದೆ” ಎಂದರು.

ನ್ಯಾಯವಾದಿ ಸಿಸ್ಟರ್ ವೇರೋನಿಕಾ ವಿ ಎಸ್ ಮಾತನಾಡಿ, “ಸುಮಾರು ಮೂರು ತಿಂಗಳುಗಳಿಂದ ಮಣಿಪುರದಲ್ಲಿ ಮಹಿಳೆಯರ ಮೇಲೆ ಹಿಂಸಾಚಾರಗಳು ನಡೆಯುತ್ತಿವೆ. ಆದರೆ ಅದಕ್ಕೆ ಸಂಬಂಧಿಸಿದಂತೆ ವಿಡಿಯೋಗಳು ಪ್ರಸಾರವಾಗದಂತೆ ಅಂತರ್ಜಾಲ ವ್ಯವಸ್ಥೆಯನ್ನು ಕಡಿತಗೊಳಿಸಿ ಘಟನೆಯನ್ನು ಹತ್ತಿಕ್ಕಿ ಕುಕಿ ಸಮುದಾಯದ ಜನರಿಗೆ ಮತ್ತು ಮಾಧ್ಯಮಗಳಿಗೆ ಈ ವಿಚಾರಗಳು ತಿಳಿಯದಂತೆ ಮಾಡಲು ಮುಂದಾದವರು ಯಾರು ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದೆ. ಘಟನೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಗಲ್ಲು ಶಿಕ್ಷೆ ನೀಡುವುದು ಸೂಕ್ತವಾಗಿದೆ. ಇದರಿಂದ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಿದಂತಾಗುತ್ತದೆ” ಎಂದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ ಮಾತನಾಡಿ, “ಹೆಣ್ಣನ್ನು ಗೌರವಿಸುವುದು ಮತ್ತು ಅವರ ಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಹೆಣ್ಣಿನ ಗರ್ಭದಿಂದ ಜನಿಸಿದ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ನಡೆದ ಮಣಿಪುರದ ಘಟನೆ ಅಮಾನುಷವಾಗಿದ್ದು, ಜಗತ್ತಿನಲ್ಲಿ ಮಾನವೀಯತೆ ಸತ್ತು ಹೋದಂತೆ ಕಾಣಿಸಿಕೊಳ್ಳುತ್ತಿದೆ. ಮಹಿಳೆಯರನ್ನು ಗೌರವಿಸದ ದೇಶ ಎಂದೂ ಅಭಿವೃದ್ಧಿ ಆಗಲು ಸಾಧ್ಯವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲುಷಿತ ನೀರು ಕುಡಿದು ಮಹಿಳೆ ಸಾವು; ಹಲವರು ಅಸ್ವಸ್ಥ

ಈ ಸಂಧರ್ಭದಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಪ್ರೇಮಾ ಕಾಳೇರ, ಉಪಾಧ್ಯಕ್ಷೆ ಕಮಲಾಕ್ಷಿ ಬೆಳಗಲಿ, ಕಾರ್ಯದರ್ಶಿ ಚಂಪಾ ಕರ್ಜಗಿ, ಲೋಯೋಲಾ ವಿಕಾಸ ಕೇಂದ್ರದ ನಿರ್ದೇಶಕ ಫಾದರ್ ಜರಾಲ್ಡ್ ಡಿಸೋಜಾ, ನ್ಯಾಯವಾದಿ ವೀಣಾ ಬ್ಯಾತನಾಳ, ಸುರೇಶ ನಿವೃತ್ತ ಸಿಡಿಪಿಒ ಬಿ ಆರ್ ಶೆಟ್ಟರ್, ರೈತ ಸಂಘದ ಅಧ್ಯಕ್ಷ ಮಾಲಿಂಗಪ್ಪ ಅಕ್ಕಿವಳ್ಳಿ, ವಿಷ್ಣುಕಾಂತ ಜಾದವ, ಜನವೇದಿಕೆ ಮುಖಂಡರು, ಹಳ್ಳಿ ಅಭಿವೃದ್ಧಿ ಸಮಿತಿ ಸದಸ್ಯರು, ಹಲವು ಸಂಘಟನೆಗಳ ಪದಾಧಿಕಾರಿಗಳು ಮತ್ತು ಮಹಿಳಾ ಸಂಘಗಳ ಸದಸ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X