ಕೇರಳದ ನರ್ಸ್ ಗಲ್ಲು ತಪ್ಪಿಸಲು ಅಂತಿಮ ಪ್ರಯತ್ನ: ತಲಾಲ್ ಕುಟುಂಬದೊಂದಿಗೆ ಇಂದು ಯೆಮನ್‌ನಲ್ಲಿ ನಿರ್ಣಾಯಕ ಮಾತುಕತೆ

Date:

Advertisements

ಯೆಮನ್‌ನ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಪ್ರಿಯ ಅವರ ಬಿಡುಗಡೆ ಸಂಬಂಧದ ಪ್ರಯತ್ನಗಳು ತೀವ್ರಗೊಂಡಿವೆ. ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆಗಳು ತಡರಾತ್ರಿವರೆಗೆ ಮುಂದುವರೆದಿದ್ದು, ನಿರ್ಣಾಯಕ ಹಂತಕ್ಕೆ ಪ್ರವೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ತಕ್ಷಣದ ಹಸ್ತಕ್ಷೇಪದ ಬಳಿಕ ಶೇಖ್ ಹಬೀಬ್ ಉಮರ್ ಅವರ ನಿಯೋಗವು ಉತ್ತರ ಯೆಮನ್‌ ನ ದಮಾರ್ ನಲ್ಲಿರುವ ತಲಾಲ್ ಕುಟುಂಬದ ತವರು ಪ್ರದೇಶಕ್ಕೆ ಭೇಟಿ ನೀಡಿ ಮಾತುಕತೆ ಆರಂಭಿಸಿದೆ. ದಮಾರ್‌ನ ಬುಡಕಟ್ಟು ಮುಖಂಡರು, ತಲಾಲ್ ಅವರ ಕುಟುಂಬ ಸದಸ್ಯರು ಮತ್ತು ಕಾನೂನು ಸಮಿತಿಯೊಂದಿಗೆ ಇಂದು ಮತ್ತಷ್ಟು ಮಾತುಕತೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಿಯೋಗದ ಮೂಲಗಳ ಪ್ರಕಾರ, ಮಾತುಕತೆಗಳು ಆಶಾದಾಯಕವಾಗಿ ಸಾಗುತ್ತಿದ್ದು, ನಾಳೆಯ ಸಂವಹನದಲ್ಲಿ ಸಮಾಧಾನ ತರಿಸುವ ಅಂತಿಮ ನಿರ್ಧಾರ ಕೈಗೊಳ್ಳಲಾಗಬಹುದೆಂಬ ನಿರೀಕ್ಷೆಯಿದೆ. ಪ್ರಕರಣವು ಗಂಭೀರವಾಗಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಕುಟುಂಬಗಳು ಅದನ್ನು ಭಾವನಾತ್ಮಕವಾಗಿ ನೋಡುತ್ತಿದೆ. ಆದುದರಿಂದ ಇದುವರೆಗೆ ನೇರ ಸಂವಾದ ಸಾಧ್ಯವಾಗಿರಲಿಲ್ಲ.ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯರ್ ಅವರ ಮಧ್ಯಪ್ರವೇಶದಿಂದ ಮಾತ್ರ ಈ ಸಮಾಲೋಚನೆ ಸಾಧ್ಯವಾಗಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಈ ನಡುವೆ, ನಿಮಿಷಪ್ರಿಯ ಅವರ ಮರಣದಂಡನೆಯನ್ನು ಜುಲೈ 16 ರಂದು ಜಾರಿಗೊಳಿಸಲಾಗುವುದೆಂಬ ವರದಿಗಳು ಬಂದಿದೆ. ಈ ಹಿನ್ನೆಲೆಗಳಲ್ಲಿ ಮುಂದಿನ ಮಾತುಕತೆಗಳು ನಿರ್ಣಾಯಕವಾಗಿದ್ದು, ತಲಾಲ್ ಕುಟುಂಬದಿಂದ ಕ್ಷಮೆ ಅಥವಾ ಶಿಕ್ಷಾ ಮುಂದೂಡಿಕೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ.

ಇಡೀ ದೇಶವು ಈ ಘಟನೆಯನ್ನು ಕುತೂಹಲದಿಂದ ನೋಡುತ್ತಿದೆ. ಎ ಪಿ ಉಸ್ತಾದರ ಮಧ್ಯಪ್ರವೇಶದಿಂದ ಮಾನವೀಯ ನೆಲೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗಬಹುದು ಎಂಬ ನಿರೀಕ್ಷೆಯಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X