ಗುಜರಾತ್ | ಮೇಲ್ಜಾತಿಯವರಿಂದ ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಹಲ್ಲೆ: ದಲಿತ ಯುವಕ ಆತ್ಮಹತ್ಯೆ

Date:

Advertisements

ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಐವರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ಬನಸ್ಕಂತ ಜಿಲ್ಲೆಯ ವಾವ್ ತಾಲೂಕಿನ ವಸರ್ದಾ ಗ್ರಾಮದ ನಿವಾಸಿ ಮಹೇಂದ್ರ ಕಲಾಭಾಯಿ ಪರ್ಮಾರ್(19) ಜುಲೈ 10ರಂದು ನಾಪತ್ತೆಯಾಗಿದ್ದರು. ಇದಾದ ಎರಡು ದಿನಗಳ ನಂತರ ಜುಲೈ 12ರಂದು ಅವರ ಮೃತದೇಹ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದೆ.

ಮಹೇಂದ್ರ ಅವರ ಚಿಕ್ಕಪ್ಪ ಬಿಜಲ್ಭಾಯ್ ಪರ್ಮಾರ್ ವಾವ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದಾರೆ. ಎಫ್ಐಆರ್‌ನಲ್ಲಿ ಖೇತಾಭಾಯಿ ರಬಾರಿ, ಸೆಂಧಭಾಯಿ ರಬಾರಿ,ಸೆಂಧಭಾಯಿ ರಬಾರಿ, ರುದಾಭಾಯಿ ರಬಾರಿ, ಅಮ್ರಭಾಯ್ ರಬಾರಿ ಮತ್ತು ಲಖಭಾಯ್ ರಬಾರಿ ತಮ್ಮ ಸಮುದಾಯದ ಸದಸ್ಯರು ಸಾಮಾನ್ಯವಾಗಿ ಧರಿಸುವ ಬಟ್ಟೆಯನ್ನು ಯಾಕೆ ಧರಿಸಿದ್ದು ಎಂದುಪ್ರಶ್ನಿಸಿ ಮಹೇಂದ್ರನಿಗೆ ಗ್ರಾಮ ಪಂಚಾಯತ್ ಕಚೇರಿಯ ಬಳಿ ಥಳಿಸಿ ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಪೊಲೀಸರು ಐವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳು ಸೇರಿದಂತೆ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸೂಚನೆ: ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ಕರ್ನಾಟಕ ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X