BREAKING NEWS | ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

Date:

Advertisements

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ತಿಳಿಸಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು ಎಂದು ಸಿಎಂ ಹೇಳಿದರು.

Siddaramaiah devanahalli 1

1777 ಎಕರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ ಎಂದು ಸಿಎಂ ತಿಳಿಸಿದರು.

ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ನಟ ಪ್ರಕಾಶ್ ರಾಜ್ ಮಾತನಾಡಿ, ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸಚಿವರಾದ ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X