ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿರುವ 11 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೇ ಬಳಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಡಿವಿಪಿ ಮುಖಂಡ ಅಕ್ಷಯಕುಮಾರ ಮಾತನಾಡಿ, “ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಪಸ್ತುತ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂ. ಹಣವನ್ನು ಸರ್ಕಾರ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಮಾಜ ಕಲ್ಯಾಣ ಇಲಾಖೆ ಸಚಿವರೇ ಇಂತಹ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧವೇ ಬೀದಿಗಿಳಿದು ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ
ಶತಶತಮಾನಗಳಿಂದ ಶೋಷಣೆಗೆ ಒಳಗಾದ ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರು, ಒಟ್ಟಾರೆ ಈ ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬಳಸಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಇದ್ದರು.