ಗದಗ | ಸಮಾಜವನ್ನು ವ್ಯಸನಮುಕ್ತ ಮಾಡುವಲ್ಲಿ ಶಿವಯೋಗಿಗಳ ಕೊಡುಗೆ ಅಪಾರ: ರಾಘವೇಂದ್ರ ಪಾಟೀಲ

Date:

Advertisements

ವ್ಯಸನ ಮುಕ್ತ ಸಮಾಜವನ್ನು ದುಶ್ಚಟಗಳು ಮತ್ತು ವ್ಯಸನ ಮುಕ್ತವಾಗಿಸುವಲ್ಲಿ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ. ಅವರು ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುತ್ತಿದ್ದರು. ಕೆಟ್ಟ ಹವ್ಯಾಸ, ಕೆಟ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ನಂತರ ಅವುಗಳನ್ನು ತ್ಯಜಿಸಬೇಕೆಂದು ಸಾರ್ವಜನಿಕರಿಗೆ ತಿಳುವಳಿಕೆ ನೀಡುತ್ತಾ ಬಹಳ ಶ್ರಮಿಸಿದ್ದಾರೆ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ರಾಘವೇಂದ್ರ ಪಾಟೀಲ ಹೇಳಿದ್ದಾರೆ.

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಜ್ಯ ಸರ್ಕಾರ ಪ್ರತಿ ವರ್ಷ ಅಗಸ್ಟ 1 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’ ಆಚರಿಸುವ ಮೂಲಕ ವ್ಯಸನದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ” ಎಂದು ತಿಳಿಸಿದರು.

“ಇಂದಿನ ಯುವಶಕ್ತಿ ದುಶ್ಚಟಗಳ ವ್ಯಸನಕ್ಕೆ ಒಳಗಾಗಿ ಸಾಮಾಜಿಕ ಜವಾಬ್ದಾರಿ ಪೂರೈಸುವಲ್ಲಿ ವಿಫಲರಾಗುತ್ತಿದ್ದಾರೆ. ತಂಬಾಕು, ಅಲ್ಕೋಹಾಲ್, ಹೆರಾಯಿನ್, ಗಾಂಜಾ, ಅಫೀಮು, ಚರಸ್ ಮುಂತಾದ ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಕ್ಕೆ ಕಾರಣವಾಗುತ್ತದೆ. ಇದರ ಅತಿಯಾದ ಸೇವನೆಯಿಂದ ಅಥವಾ ಬಳಕೆಯಿಂದ ವ್ಯಕ್ತಿಯು ವ್ಯಸನಕ್ಕೆ ಒಳಗಾಗಿ ತನ್ನ ದೈನಂದಿನ ಕರ್ತವ್ಯಗಳನ್ನು ಮರೆತು ಕಳ್ಳತನ, ಮೋಸ, ವಂಚನೆಗಳನ್ನು ಮಾಡಿ ಮಾದಕ ವಸ್ತುಗಳ ದಾಸನಾಗುತ್ತಾನೆ. ಇದರಿಂದ ವ್ಯಕ್ತಿಯ ಮೆದುಳಿನ ಸವಕಳಿ, ನರದೌರ್ಬಲ್ಯ ಉಂಟಾಗುತ್ತದೆ. ದೂಮಪಾನ ಮಾಡುವುದರಿಂದ ವ್ಯಕ್ತಿಯ ಸುತ್ತಮುತ್ತಲನವರಿಗೂ ಸಹ ದೈಹಿಕ ದುಷ್ಪರಿಣಾಮ ಉಂಟಾಗುತ್ತದೆ. ಪಾಲಕರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದರೆ ಮಕ್ಕಳೂ ಸಹ ವ್ಯಸನಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ ಹಾಗೂ ವ್ಯಕ್ತಿಗಳು ಹಲವಾರು ತಪ್ಪು ತಿಳುವಳಿಕೆಯಿಂದ ಮಾದಕ ವಸ್ತುಗಳ ವ್ಯಸನಿಗಳಾಗುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ನಮ್ಮ ದೇಶದಲ್ಲಿ 26 ಕೋಟಿ ಜನ ತಂಬಾಕು ಸೇವನೆ ಮಾಡುತ್ತಿದ್ದಾರೆ. 16 ಕೋಟಿ ಜನ ಮದ್ಯ ವ್ಯಸನಿಯಾಗಿದ್ದಾರೆ. 3 ಕೋಟಿ ಜನ ಗಾಂಜಾ ಉಪಯೋಗಿಸುತ್ತಿದ್ದಾರೆ. 51 ಲಕ್ಷ ಜನರು ಮಾದಕ ದ್ರವ್ಯ ವಸ್ತು ಉಪಯೋಗಿಸುತ್ತಿದ್ದಾರೆ. ಆ ಪೈಕಿ 26 ಲಕ್ಷ ಜನ ಮಕ್ಕಳು ವ್ಯಸನಕ್ಕೆ ಒಳಗಾಗಿದ್ದಾರೆ. ತಂಬಾಕು ಸೇವನೆಯಿಂದ ಶೇಕಡ 90 ರಷ್ಟು ಕ್ಯಾನ್ಸರ್ ಬರುವ ಸಂಭವವಿರುತ್ತದೆ. ವ್ಯಸನಿಗಳ ಚಿಕಿತ್ಸೆಗಾಗಿ ಪ್ರತಿ ವರ್ಷ ದೇಶದಲ್ಲಿ 2 ಸಾವಿರ ಬಿಲಿಯನನ್ನಷ್ಟು ಖರ್ಚು ಮಾಡಲಾಗುತ್ತಿದೆ. ವಿಶ್ವದಲ್ಲಿನ ಮಾದಕ ವಸ್ತುಗಳ ವ್ಯಸನಿಗಳ ಪೈಕಿ ಶೇ 17 ರಷ್ಟು ಭಾರತದಲ್ಲಿದ್ದಾರೆ. ಮಾದಕ ವ್ಯಸನಿಗಳು ವೈದ್ಯರ ಸಲಹೆಯೊಂದಿಗೆ ಸೂಕ್ತ ಚಿಕಿತ್ಸೆ ಪಡೆದರೆ ವ್ಯಸನತೆಯಿಂದ ಹೊರಬರಬಹುದಾಗಿದೆ. ಭಾರತ ಸರ್ಕಾರದ ಟೆಲಿಮಾನಸ ಕಾರ್ಯಕ್ರಮದಲ್ಲಿ ಆನ್‌ಲೈನ್ ಮುಖಾಂತರ ಭಾಗವಹಿಸಿ ವ್ಯಸನ ಮುಕ್ತತೆಗಾಗಿ ವೈದ್ಯರ ಸಲಹೆಗಳನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವ್ಯಸನ ಮುಕ್ತತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ ನುಚ್ಚಿನ್, ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ. ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳಿ, ಡಿಡಿಪಿಐ ಜಿ.ಎಲ್.ಬಾರಾಟಕ್ಕೆ,ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಹುಲಗಣ್ಣವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಶಿವಾನಂದ ಗಿಡ್ನಂದಿ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X