ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವ್ಯಕ್ತಿಯ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಶ್ವಿಮ ಬಂಗಾಳ ಮೂಲದ ಬಿಜನ್‌ದಾಸ್ ಎಂಬುವವನು ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ, ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಲ್ಲದೆ, ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಹೇಳಿಕೆ ನೀಡಿದ್ದಾರೆ.
ಜತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ಬಗ್ಗೆ ಮಾತಾಡಿದ್ದಾರೆ ಎಂದು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಬಿಜನ್‌ದಾಸ್ ವಿರುದ್ಧ ದೂರು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೆರೆ, ರಾಜಕಾಲುವೆಗಳ ಒತ್ತುವರಿ ತೆರವು: ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಬೆಂಗಳೂರು | ಪತ್ನಿಯನ್ನು ಕೊಂದು ತಾನೂ ವಿಷ ಸೇವಿಸಿ ಸಾವನ್ನಪ್ಪಿದ್ದ ಪತಿ
ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಜಗಳ ನಡೆದಿದ್ದು, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕಾಲೋನಿಯ ನಿವಾಸಿ ಲಕ್ಷ್ಮಮ್ಮ ಅವರನ್ನು ಆಕೆಯ ಪತಿ ವೆಂಕಟಸ್ವಾಮಿ ಹತ್ಯೆಗೈದಿದ್ದಾನೆ. ಬಳಿಕ, ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಇದ್ದರು. ಇಬ್ಬರಿಗೂ ಮದುವೆ ಮಾಡಿಕೊಟ್ಟಿದ್ದರು. ದಂಪತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆಗಸ್ಟ್ 2ರಂದು ರಾತ್ರಿ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಪತಿ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ್ದಾನೆ. ನಂತರ ವೆಂಕಟಸ್ವಾಮಿ ಪತ್ನಿಯನ್ನು ಕೊಂದೆ ಎಂದು ಪ್ರಾಯಶ್ಚಿತ ಪಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಕ್ಕಪಕ್ಕದ ಮನೆಯವರು ಬೆಳಗ್ಗೆ ಈ ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸರ್ಜಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.