ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ ಕೆ ಶಿವಕುಮಾರ್

Date:

Advertisements

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

“ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು. ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ” ಎಂದರು.

Advertisements

“ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು. ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ಹೇಳಿದರು.

ಜನರ ಕಲ್ಯಾಣಕ್ಕಾಗಿ 25% ಹಣ ವಿನಿಯೋಗ

“ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂ.ಹಣ ನೀಡಿದೆ. 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ. ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ” ಎಂದರು.

“ಈ ದೇಶದ ಇತಿಹಾಸದಲ್ಲಿ ಕಾಂಗ್ರೆಸ್ ನೀಡಿರುವ ಹಲವಾರು ಕಾರ್ಯಕ್ರಮಗಳನ್ನು ಯಾರೂ ಸಹ ನಿಲ್ಲಸಲು ಸಾಧ್ಯವಿಲ್ಲ. ಉಳುವವನೆ ಭೂಮಿಯ ಒಡೆಯ, ಅಂಗನವಾಡಿ, ಆಶಾ, ನರೇಗಾ ಹೀಗೆ ನೂರಾರು ಕಾರ್ಯಕ್ರಮಗಳು ಕಾಂಗ್ರೆಸ್ ಜನರಿಗೆ ನೀಡಿರುವ ಶಕ್ತಿ. ಅರಣ್ಯ ಭೂಮಿ ಹಕ್ಕು, ಆಹಾರ ಭದ್ರತಾ ಕಾಯ್ದೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಸಾಧ್ಯವಾಯಿತೇ? ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿದ್ದು ಬಂಗಾರಪ್ಪ ಅವರು. ನಾವು ಯಾವುದೇ ರಾಜಕೀಯ ದೃಷ್ಟಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿಲ್ಲ. ಜನರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದ್ದೇವೆ. ಬ್ಯಾಂಕ್ ಗಳ ರಾಷ್ಟ್ರೀಕರಣದಿಂದ ಬ್ಯಾಂಕ್ ಗಳೇ ಮನೆ ಬಾಗಿಲಿಗೆ ಬಂದಿವೆ. ಬಿಸಿಯೂಟ, ಅನ್ನಭಾಗ್ಯ ಇದೆಲ್ಲವೂ ಕ್ರಾಂತಿಕಾರಕ ಯೋಜನೆಗಳು. ಹಟ್ಟಿ, ತಾಂಡಾಗಳಲ್ಲಿ ವಾಸವಿರುವ ಜನರು ಯಾವುದೇ ಭೂ ದಾಖಲೆಗಳನ್ನು ಹೊಂದಿರಲಿಲ್ಲ. ಅವರಿಗೆಲ್ಲ ಉಚಿತವಾಗಿ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ 1,11,111 ದಾಖಲೆಗಳನ್ನು ನೀಡಲಾಯಿತು” ಎಂದು ತಿಳಿಸಿದರು.

ವಾರ್ಡ್, ಪಂಚಾಯ್ತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ

“ನೀವುಗಳು ಕೂಡ ಈ ಕೆಲಸ ಮಾಡಬೇಕು. ಪ್ರತಿ ವಾರ್ಡ್, ಪಂಚಾಯ್ತಿಯಲ್ಲಿ ಗ್ಯಾರಂಟಿ ಸಮಾವೇಶ ಮಾಡುವುದರ ಬಗ್ಗೆ ಚರ್ಚಿಸುತ್ತಿದ್ದೇವೆ. ಆಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ಇಂದಿನ ಕಾರ್ಯಕ್ರಮಕ್ಕೆ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಅಧ್ಯಕ್ಷರು, ಮಾಜಿ ಕೌನ್ಸಲರ್ ಗಳನ್ನು ಕರೆಸಿದ್ದು, ನೀವು ಈ ವಿಚಾರವಾಗಿ ಯಾವ ರೀತಿ ಕೆಲಸ ಮಾಡುತ್ತೀರಿ ಅದರ ಮೇಲೆ ನಿಮ್ಮ ಹಣೆಬರಹ ನಿರ್ಧಾರವಾಗಲಿದೆ. ಡಿ.ಕೆ. ಶಿವಕುಮಾರ್, ಹೆಚ್.ಎಂ ರೇವಣ್ಣ ಹಿಂದೆ ಗಿರಕಿ ಹೊಡೆದರೆ ಪಾಲಿಕೆ ಚುನಾವಣೆ ಟಿಕೆಟ್ ಸಿಗುತ್ತದೆ ಎಂದು ನೀವು ಭಾವಿಸಿದ್ದರೆ, ಅದನ್ನು ತಲೆಯಿಂದ ತೆಗೆದುಹಾಕಿ. ನೀವು ಸ್ಥಳೀಯ ಮಟ್ಟದಲ್ಲಿದ್ದು ಕೆಲಸ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

33% ಮೀಸಲಾತಿ ಜಾರಿಯಾದರೆ 75 ಜನ ಮಹಿಳಾ ಶಾಸಕಿಯರು

“ಕಾರ್ಯಕರ್ತರು ಯಾವುದಕ್ಕೂ ಚಿಂತನೆ ಮಾಡಬೇಡಿ. ಎಲ್ಲರೂ ಶಾಸಕರು, ಪಾಲಿಕೆ ಸದಸ್ಯರು ಆಗಲು ಆಗುವುದಿಲ್ಲ. ಮನೆಯಲ್ಲಿ ಬೈದರೂ ಕೂಡ ನಮ್ಮ ಮಹಿಳಾ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಾರೆ. ಅವರಿಗಾಗಿ ಏನಾದರೂ ಮಾಡಲೇಬೇಕು. ಇದಕ್ಕಾಗಿ ರಾಜಕೀಯದಲ್ಲಿ 33% ಮೀಸಲಾತಿ ತರಲು ನಾವು ಪ್ರಯತ್ನ ಮಾಡಿದ್ದೆವು. ಮುಂದೆ ಇದು ಜಾರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಇದನ್ನು ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ. ಇದು ಜಾರಿಯಾದರೆ, ನಮ್ಮ ಜೊತೆಗೆ 75 ಜನ ಮಹಿಳಾ ಶಾಸಕಿಯರು ಇರುತ್ತಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ 50% ಮೀಸಲಾತಿ ನೀಡಿದ್ದೇವೆ” ಎಂದು ಹೇಳಿದರು.

ಬಿಜೆಪಿ ಯಾವತ್ತಿಗೂ ಅಭಿವೃದ್ಧಿಯ ವಿರುದ್ಧ

ಕಾರ್ಯಕ್ರಮದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಟನಲ್ ರಸ್ತೆ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ದೆಹಲಿ, ಮುಂಬೈ ಹಾಗೂ ದೇಶದ ಇತರೇ ಭಾಗಗಳಲ್ಲಿ ಟನಲ್ ರಸ್ತೆ ಮಾಡಲಾಗುತ್ತಿದೆ. ಅಲ್ಲೆಲ್ಲಾ ಯಾವ ಕಾರಣಕ್ಕೆ ಟನಲ್ ರಸ್ತೆ ಮಾಡಲಾಗುತ್ತಿದೆ. ಇಲ್ಲಿ ಮಾತ್ರ ಯಾಕೆ ವಿರೋಧ. ಆತನಿಗೆ (ತೇಜಸ್ವಿ ಸೂರ್ಯ) ಆನಂತರ ಉತ್ತರಿಸುತ್ತೇನೆ. ನಾವು ಏನೇ ಮಾಡಿದರು ಟೀಕೆ ಮಾಡುತ್ತಾರೆ. ಬಿಜೆಪಿ ಯಾವತ್ತಿಗೂ ಅಭಿವೃದ್ಧಿಯ ವಿರುದ್ಧವಾಗಿರುವ ಪಕ್ಷ. ಬೆಂಗಳೂರಿಗೆ ಅವರ ಕೊಡುಗೆ ಶೂನ್ಯ” ಎಂದರು.

ಮೆಟ್ರೋ ಡಿಪಿಆರ್‌ ಅನ್ನೇ ಟನಲ್‌ ರಸ್ತೆ ಡಿಪಿಆರ್‌ ಆಗಿ ನಕಲು ಮಾಡಲಾಗಿದೆ ಎಂದಾಗ, “ಆತನಿಗೆ ಉತ್ತರ ನೀಡಲು ಹೋಗುವುದಿಲ್ಲ. ಮೆಟ್ರೋ ಕಾಂಗ್ರೆಸ್‌ ಪಕ್ಷದ ಕೊಡುಗೆ” ಎಂದು ಉತ್ತರ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X