ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ರಾಜು ಮಲ್ಲಪ್ಪ ಹೊಸಮನಿ (50) ಮೃತರು. ಮೃತರು ಚಿಟ್ಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಲೋಕ ಅದಾಲತ್ : 81,508 ಪ್ರಕರಣ ಇತ್ಯರ್ಥ : ಪ್ರಕಾಶ ಬನಸೊಡೆ