ಶಿವಮೊಗ್ಗ | ಫೋನ್‌ ಪೇ ಮೂಲಕ ಸೈಬರ್ ವಂಚನೆ

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್‌ ನಂಬರನ್ನೇ ಹ್ಯಾಕ್‌ ಮಾಡಿ ಗೂಗಲ್‌ ಪೇ, ಫೋನ್‌ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.

ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಶಿವಮೊಗ್ಗದ ವ್ಯಕ್ತಿ ಕಳೆದ ತಿಂಗಳು ವಿದ್ಯುತ್‌ ಬಿಲ್‌ ₹754‌ ಅನ್ನು ಫೋನ್‌ ಪೇ ಮೂಲಕ ಪಾವತಿಸಿದ್ದರು, ಅವರ ಬ್ಯಾಂಕ್‌ ಖಾತೆಯಲ್ಲಿ ₹94,624 ಬ್ಯಾಲೆನ್ಸ್‌ ಇರುವುದಾಗಿ ತಿಳಿಸಲಾಗಿತ್ತು. ಬೇರೊಂದು ಕಡೆ ಫೋನ್‌ ಪೇ ಸ್ಕ್ಯಾನರ್‌ ಬಳಸುವಾಗ ಅದು ಸರಿಯಾಗಿ ಕೆಲಸ ಮಾಡಲಿಲ್ಲ. ಕೆಲವು ದಿನ ಮೊಬೈಲ್‌ ನೆಟ್‌ವರ್ಕ್‌ ಕೂಡ ಸಮಸ್ಯೆಯಾಗಿತ್ತು. ಹಾಗಾಗಿ ಫೋನ್‌ ಪೇ ಕೂಡ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.‌

Advertisements

ಹಣ ಬಿಡಿಸಿಕೊಳ್ಳಲು ಶಿವಮೊಗ್ಗದ ವ್ಯಕ್ತಿ ಬ್ಯಾಂಕ್‌ಗೆ ತೆರಳಿದ್ದರು. ಆಗ ಅವರ ಬ್ಯಾಂಕ್‌ ಖಾತೆಯಲ್ಲಿ ಕೇವಲ ₹4,025 ಇತ್ತು. ವಿಚಲಿತರಾದ ವ್ಯಕ್ತಿ ಬ್ಯಾಂಕ್‌ ಖಾತೆಯ ಸ್ಟೇಟ್‌ಮೆಂಟ್‌ ತೆಗೆಸಿದ್ದಾರೆ. ಆಗ ಅವರ ಖಾತೆಯಿಂದ ಹಲವು ಭಾರಿ ಯುಪಿಐ ಮೂಲಕ ಒಟ್ಟು ₹90,599 ವರ್ಗಾವಣೆ ಆಗಿರುವುದು ಗೊತ್ತಾಗಿದೆ.

ಇದನ್ನು ಓದಿದ್ದೀರಾ? ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

ಮೊಬೈಲ್‌ ನಂಬರ್‌ ಹ್ಯಾಕ್‌ ಮಾಡಿ, ಯುಪಿಐ ಮೂಲಕ ಹಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದ ವ್ಯಕ್ತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X