ಧಾರವಾಡ | ರೈತರು ಆತ್ಮಹತ್ಯೆಗೆ ಮುಂದಾಗಬಾರದು: ಸಚಿವ ಸಂತೋಷ್ ಲಾಡ್

Date:

Advertisements

ರೈತರು ಆತ್ಮಹತ್ಯೆಗೆ ಶರಣಾಗಿರುವುದು ತುಂಬಾ ದುಃಖವನ್ನು ಉಂಟುಮಾಡಿದೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ರೈತರ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, “ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು” ಎಂದು ಹೇಳಿದರು.

“ಮೃತ ರೈತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು” ಎಂದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Advertisements
ಸಚಿವ ಸಂತೋಷ್‌ ಲಾಡ್‌ 1

“ಹಂತ ಹಂತವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ ಬೆಳೆವಿಮೆ ಪರಿಹಾರವನ್ನು ವಿತರಣೆ ಮಾಡಲಾಗುವುದು. ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು.

“ಭರದ್ವಾಡ ಗ್ರಾಮದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಸರ್ಕಾರದ ವತಿಯಿಂದ ಅವರ ಕುಟುಂಬಸ್ಥರಿಗೆ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ಪೌಂಡೇಶನ್ ವತಿಯಿಂದ ಭರಿಸಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ ಎಸ್ ಅಕ್ಕಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿಆರ್‌ಜೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ ರಾಜು ಮಾವರಕರ, ಶಿವಾನಂದ ಬೆಂತೂರ, ಷಣ್ಮುಖ ಶಿವಳ್ಳಿ, ಚಂದ್ರಶೇಖರ ಜಟ್ಟಲ್, ಮದೇವಪ್ಪ ಮಾಡಳ್ಳಿ, ವೆಂಕನಗೌಡ್ರ ಪೊಲೀಸ್‍ಪಾಟೀಲ್, ಎಂ ಎಂ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X