ಸಾಮಾಜಿಕ ಜಾಲತಾಣವಾದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಳಾಯಿ ಗ್ರಾಮದ ಕೆ.ಕೆ. ಶೆಟ್ಟಿ ಕಾಂಪೌಂಡ್ ನಿವಾಸಿ ರಾಮ ಪ್ರಸಾದ್ ಯಾನೆ ಪೋಚ(42) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಪ್ರಕರಣವೊಂದರಲ್ಲಿ ಭಾಗಿಯಾಗಿ ಸದ್ಯ ಉಡುಪಿ ಜಿಲ್ಲಾ ಕಾರಾಗೃಹದಲ್ಲಿರುವ ಸುರತ್ಕಲ್ ಕೋಡಿಕೆರೆ ನಿವಾಸಿ ಲೋಕೇಶ್ ಎಂಬಾತನನ್ನು ಬಾಡಿ ವಾರೆಂಟ್ ಪಡೆದು ಸುರತ್ಕಲ್ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
