ಹರಿಯಾಣ ಗಲಭೆ: ದೆಹಲಿಗೆ ವ್ಯಾಪಿಸದಂತೆ ಕಟ್ಟೆಚ್ಚರ

Date:

Advertisements

ಹರಿಯಾಣ ರಾಜ್ಯದಲ್ಲಿ ಭುಗಿಲೆದ್ದಿರುವ ಕೋಮು ಗಲಭೆ ರಾಷ್ಟ್ರ ರಾಜಧಾನಿಗೆ ವ್ಯಾಪಿಸದಂತೆ ದೆಹಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಗುರುಗ್ರಾಮದ ಸೆಕ್ಟರ್ 70ರಲ್ಲಿ ಹಲವು ಅಂಗಡಿ ಹಾಗೂ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಗಲಭೆ ನಿಯಂತ್ರಿಸಲು ಪೆಟ್ರೋಲ್ ಹಾಗೂ ಡೀಸೆಲ್ ಚಿಲ್ಲರೆ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಎರಡು ದಿನಗಳ ಹಿಂದೆ ಹರಿಯಾಣದ ಸಮೀಪದ ನುಹ್ ಜಿಲ್ಲೆಯಲ್ಲಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ಐವರು ಮೃತಪಟ್ಟಿದ್ದರು. ಗಲಭೆಯು ಗುರುಗ್ರಾಮದ ಸೆಕ್ಟರ್ 57ರಲ್ಲಿರುವ ಅಂಜುಮನ್ ಮಸೀದಿಗೆ ಅಪರಿಚಿತರು ಬೆಂಕಿ ಹಚ್ಚಿದ್ದು, ಘಟನೆಯಲ್ಲಿ 26 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.

Advertisements

ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್‌ಗಳನ್ನು ಬಳಸಲು ಪೊಲೀಸರು ಚಿಂತಿಸುತ್ತಿದ್ದು, ಯಾವುದೇ ಕಾರಣಕ್ಕೂ ಹಿಂಸಾಚಾರಕ್ಕೆ ಅನುವು ಮಾಡಿಕೊಡಬಾರದು ಎಂಬ ನಿರ್ಧರಿಸಿದ್ದಾರೆ.

ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್‌ಗಳ ಬಳಕೆ, ಹೆಚ್ಚಿನ ಗಸ್ತು ಮತ್ತು ಪೊಲೀಸರು ಕಣ್ಗಾವಲು ಇಡುವ ಮೂಲಕ ದೆಹಲಿ ಅಡಳಿತ ಎಚ್ಚರಿಕೆಯಲ್ಲಿದೆ.

ಗಲಭೆ ಪ್ರದೇಶದಿಂದ ಕೇವಲ ಇಪ್ಪತ್ತು ಕಿಲೋಮೀಟರ್ ದೂರದಲ್ಲಿರುವ ನೆರೆಯ ಪ್ರದೇಶಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ರಾಷ್ಟ್ರ ರಾಜಧಾನಿಯಲ್ಲಿ ಉದ್ಭವಿಸುವ ಯಾವುದೇ ಪರಿಸ್ಥಿತಿಯನ್ನು ತಡೆಯಲು ಪೊಲೀಸ್ ಪಡೆ ಸಿದ್ಧವಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ

ಹಿಂಸಾಚಾರದ ಘಟನೆಗಳು ನಡೆದ ನಂತರ ಗುರುಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಹಿಂಸಾಚಾರದ ಕುರಿತು ಗುರುಗ್ರಾಮ್ ಪೊಲೀಸರು ಪರಿಶೀಲನೆಗಳ ಮೂಲಕ ಎಚ್ಚರಿಕೆ ವಹಿಸುತ್ತಿದ್ದಾರೆ.

ವದಂತಿಗಳನ್ನು ನಂಬಬೇಡಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ವರದಿಗಳ ಮೇಲೆ ವಿಶ್ವಾಸವಿಡಬೇಡಿ ಎಂದು ಪೊಲೀಸರು ನಾಗರಿಕರಿಗೆ ಮನವಿ ಮಾಡಿದ್ದಾರೆ.

ಶಾಲಾ ಕಾಲೇಜುಗಳು, ಕೆಲಸದ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸಂದೇಶಗಳು ಸುಳ್ಳು. ಎಲ್ಲ ವಾಹನ ಸಂಚಾರ, ಶಾಲಾ ಕಾಲೇಜುಗಳು ಎಂದಿನಂತೆ ನಡೆಯುತ್ತದೆ, ಯಾವುದೇ ನಿರ್ಬಂಧಗಳಿಲ್ಲ ಎಂದು ಗುರುಗ್ರಾಮದ ಸಹಾಯಕ ಪೊಲೀಸ್ ಆಯುಕ್ತ ವರುಣ್ ಕುಮಾರ್ ದಹಿಯಾ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X