ಬೀದರ್‌ | ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ತುಂಬಿ : ಸಿಇಒ ಗಿರೀಶ ಬದೋಲೆ

Date:

Advertisements

ವಸತಿ ನಿಲಯ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಗಳವಾರ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಜತೆಗೆ ತುರ್ತು ಸಭೆ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿದ್ದಾರೆ.

ʼಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್‌ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿನ್ನಲೆ ಜಿಲ್ಲೆಯ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಬೇಕುʼ ಎಂದರು.

Advertisements

ʼವೈದ್ಯರು ವಸತಿ ನಿಲಯ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅವರ ಚಲನವಲನಗಳಲ್ಲಿ ವ್ಯತ್ಯಾಸ, ಖಿನ್ನತೆಯಂತಹ ವಿಷಯಗಳು ಕಂಡುಬಂದಲ್ಲಿ ವೈದ್ಯರು ಹಾಗೂ ವಾರ್ಡನ್‌ಗಳು, ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಬೇಕು. ಆ ಮೂಲಕ ಮಕ್ಕಳ ಆರೋಗ್ಯದ ಸ್ಥಿರತೆ ಕಾಪಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಮತ್ತು ವಾರ್ಡನ್‌ಗಳ ಮಾಹಿತಿಯನ್ನು ಅಧಿಕಾರಿಗಳು ಒಂದೆರಡು ದಿನದಲ್ಲಿ ನೀಡಬೇಕು. ಹಾಸ್ಟೆಲ್‌ಗಳಿಗೆ ಆಯಾ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ನೇಣು ಬಿಗಿದು ಸರ್ಕಾರಿ ಶಾಲೆ ಶಿಕ್ಷಕ ಆತ್ಮಹತ್ಯೆ

ಮನೋವೈದ್ಯರಾದ ಡಾ.ಅಮಲ್ ಮತ್ತು ಡಾ.ರಾಘವೇಂದ್ರ, ಬಿಸಿಎಂ ಜಿಲ್ಲಾ ಅಧಿಕಾರಿ ಸಂಗೀತಾ ಬಿರಾದರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X