ಖಾಸಗಿ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ.
ಅಂಬೇಶ್ (36) ಮೃತರು. ಸರಕು ಸಾಗಣೆ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಮರದ ಕೊಂಬೆಗೆ ನೇಣು ಹಾಕಿಕೊಂಡಿದ್ದಾರೆ.
ಮೃತ ಅಂಬೇಶ ಮೂರು ವರ್ಷದ ಹಿಂದೆ ಸಾಲ ಪಡೆದಿದ್ದ, ಕಳೆದ ಮೂರು ತಿಂಗಳಿಂದ ದುಡಿಮೆ ಇಲ್ಲದ ಕಾರಣ ತಿಂಗಳ ಕಂತು ₹14,301 ಕಟ್ಟಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಮೂರು ದಿನಗಳಿಂದ ಅವರ ಮನೆ ಬಳಿ ಬಂದ ಚೋಳಾ ಫೈನಾನ್ಸ್ ಕಂಪನಿಯ ಸಿಬ್ಬಂದಿ, ಅವಾಚ್ಯ ಪದಗಳಿಂದ ನಿಂದಿಸಿದ್ದರುʼ ಎಂದು ಅಂಬೇಶ್ ಪತ್ನಿ ಕೆ.ಮಂಜುಳಾ ದೂರು ನೀಡಿದ್ದಾರೆ.
ಇದನ್ನೂ ಓದಿ : ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ
ತಂಬ್ರಹಳ್ಳಿ ಠಾಣೆಯಲ್ಲಿ ಫೈನಾನ್ಸ್ ವ್ಯವಸ್ಥಾಪಕ ಮತ್ತು ಸಿಬ್ಬಂದಿ ನಾಗಲಾಪುರ ತಾಂಡಾದ ನವೀನ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.