ಮರಕ್ಕೆ ನೇಣು ಬಗಿದ ಸ್ಥಿತಿಯಲ್ಲಿ ಯವತಿಯೊಬ್ಬರು ಮೃತದೇಹ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಡಿವಿಕೊತ್ತೂರು ಅರಣ್ಯದಲ್ಲಿ ನಡೆದಿದೆ. ಮೃತ ಯುವತಿ ಸುಮಾರು 25 ವರ್ಷದ ವಯಸ್ಸಿನವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವತಿ ಮೂರ್ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ಭಾಗಿಯಾಗಿವೆ.
“ಪ್ರಕರಣವು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ತೋರುತ್ತಿದೆ. ಅದಕ್ಕೆ ಪೂರಕವಾದ ಸಾಕ್ಷ್ಯಗಳು ಸಿಕ್ಕಿವೆ. ಆಕೆ ತನ್ನ ಪ್ರಿಯಕರನ ಜೊತೆ ಜಗಳ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪ್ರಿಯಕರನನ್ನು ಗುರುತಿಸಲಾಗಿದೆ. ವಿಚಾರಣೆ ನಡೆಯುತ್ತಿದೆ” ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.