ನವದೆಹಲಿ | ಇನ್‌ಸ್ಟಾದಲ್ಲಿ ಪರಿಚಯವಾದ ನಾಲ್ವರು ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Date:

Advertisements

ನವದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ತಾಯಿ ಮಾರುಕಟ್ಟೆಗೆ ಹೋಗಿದ್ದು, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಗೆ ಸಂತ್ರಸ್ತೆ ಆಗಾಗ್ಗ ಸಂದೇಶ ಕಳುಹಿಸುತ್ತಿದ್ದಳು. ಭಾನುವಾರ ಬೆಳಿಗ್ಗೆ 11.30ಕ್ಕೆ ಆತ ಇವರ ಮನೆಗೆ ಬಂದು ಬಾಗಿಲು ಬಡಿದಿದ್ದಾನೆ. ಜತೆಗೆ ತನ್ನೊಂದಿಗೆ ಇತರ ಮೂವರನ್ನೂ ಕರೆದುಕೊಂಡು ಬಂದಿದ್ದಾನೆ. ಬಾಲಕಿಯನ್ನು ಬಲವಂತವಾಗಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ’ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

‘ಇದೇ ಸಂದರ್ಭದಲ್ಲಿ ಮಾರುಕಟ್ಟೆಗೆ ಹೋಗಿದ್ದ ತಾಯಿ ಮನೆಗೆ ಮರಳಿದ್ದಾರೆ. ಬಾಗಿಲು ತೆರೆದಿದ್ದನ್ನು ಕಂಡು ಗಾಬರಿಯಾದ ಅವರು, ನೇರವಾಗಿ ಕೋಣೆಗೆ ಹೋಗಿದ್ದಾರೆ. ಅಲ್ಲಿ ಬಾಲಕಿಯೊಂದಿಗೆ ನಾಲ್ವರು ಹುಡುಗರನ್ನು ಕಂಡ ಅವರು, ತಕ್ಷಣ ಕೊಠಡಿಯ ಬಾಗಿಲು ಹಾಕಿ ಬೀಗ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಪೊಲೀಸರು ಮನೆಗೆ ಬರುವುದರೊಳಗಾಗಿ ವಸತಿ ಸಮುಚ್ಚಯದ ಆಡಳಿತ ಮಂಡಳಿಯ ಸದಸ್ಯರು ಬಾಲಕಿ ಮನೆಗೆ ತೆರಳಿ, ಬಾಲಕರನ್ನು ಬಿಡಿಸಿ ಹೊರಕ್ಕೆ ಕಳುಹಿಸಿದ್ದಾರೆ. ಬಾಲಕಿಯ ತಂದೆ ನಾಲ್ವರು ಹುಡುಗರ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಆರೋಪಿತ ಬಾಲಕರು 11, 10 ಹಾಗೂ 9 ನೇ ತರಗತಿಯವರಾಗಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಹೇಳಿಕೆಯನ್ನು ಈವರೆಗೂ ದಾಖಲಿಸಿಕೊಂಡಿಲ್ಲ. ಆರೋಪಿಗಳ ಬಂಧನ ಈವರೆಗೂ ಆಗಿಲ್ಲ. ಪ್ರಕರಣ ತನಿಖೆಯ ಹಂತದಲ್ಲಿದೆ’ ಎಂದು ಎಸಿಪಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X