ಮಂಗಳೂರು ನಗರದ ಕೊಣಾಜೆಯ ಮೊಂಟೆಪದವು ಬಳಿ ಒಬ್ಬಂಟಿಯಾಗಿ ವಾಸವಿದ್ದ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಘಟನೆ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಿಹಾರ ಮೂಲದವನ್ನಾಗಿದ್ದು, ಸ್ಥಳೀಯವಾಗಿ ಗಾರೆ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಂಟೆಪದವು ಸಮೀಪ ಮೇ 29ರಂದು ಬಾವಿಯಲ್ಲಿ ಸೊಂಟಕ್ಕೆ ಕಲ್ಲು ಕಟ್ಟಿದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬ ಮಹಿಳೆಯ ಮೃತದೇಹ ದೊರೆತಿತ್ತು. ಮಹಿಳೆಯನ್ನು ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ತಾಯಿ ಸುಜಾತ ಭಟ್ ದೂರು
ಮೊಂಟೆಪದವು ಸಮೀಪ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಮಹಿಳೆ ಸುಮಾರು ಒಂದೂವರೆ ವರ್ಷಗಳಿಂದ ಮನೆ ಕೆಲಸ ಮಾಡುತ್ತಿದ್ದರು. ತನಿಖೆ ತೀವ್ರಗೊಳಿಸಿದ್ದ ಕೊಣಾಜೆ ಪೊಲೀಸರು ಘಟನೆ ನಡೆದು ಎರಡು ತಿಂಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
