ದಕ್ಷಿಣ ಕನ್ನಡ | ತೊಕ್ಕೊಟ್ಟು ಜಂಕ್ಷನ್ ರಿಕ್ಷಾ ಪಾರ್ಕಿಂಗ್ ಅವ್ಯವಸ್ಥೆ; ಸರಿಪಡಿಕೆಗೆ ಸಿಐಟಿಯು ಒತ್ತಾಯ

Date:

Advertisements

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಆಟೋರಿಕ್ಷಾ ನಿಲುಗಡೆ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹೊರಗಿನ ರಿಕ್ಷಾಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಿಐಟಿಯು ಸಂಯೋಜಿತ ಆಟೋ ರಿಕ್ಷಾ ಚಾಲಕರ ಫೆಡರೇಷನ್‌ನ ಉನ್ನತ ಮಟ್ಟದ ನಿಯೋಗವೊಂದು ಸಂಚಾರ ಪೊಲೀಸ್ ಅಧಿಕಾರಿ ಹಾಗೂ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

“ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿರುವ ಆಟೋರಿಕ್ಷಾ ಪಾರ್ಕಿಂಗ್‌ ಪ್ರದೇಶ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ಹೊರಗಿನ ರಿಕ್ಷಾಗಳ ಹಾವಳಿ ತೀರಾ ಮಿತಿ ಮೀರುತ್ತಿದ್ದು, ಪಾರ್ಕಿಂಗ್‌ನಲ್ಲಿ ರಿಕ್ಷಾಗಳು ಕ್ಯೂ ನಿಂತಿದ್ದರೂ ಕಣ್ಣೆದುರಲ್ಲೇ ಸರ್ವಿಸ್ ಮಾಡುತ್ತಿರುವುದರಿಂದ ಸ್ವತಃ ಪಾರ್ಕಿಂಗ್‌ನಲ್ಲಿರುವ ಸುಮಾರು 50ರಷ್ಟು ರಿಕ್ಷಾ ಚಾಲಕರಿಗೆ ದುಡಿಯಲು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಂಗಳೂರಿನಿಂದ ಉಳ್ಳಾಲ ತಲಪಾಡಿ ಕಡೆಗೆ ಹೋಗುವ ಬಸ್‌ಗಳು ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಬಳಿಕ ಮತ್ತೆ ರಿಕ್ಷಾ ಪಾರ್ಕಿಂಗ್ ಇರುವ ತೊಕ್ಕೊಟ್ಟು ಜಂಕ್ಷನ್ ಬಳಿಯಲ್ಲಿ ನಿಲ್ಲಿಸಿ ಅನಗತ್ಯವಾಗಿ ರಿಕ್ಷಾ ಚಾಲಕರಿಗೆ ತೊಂದರೆ ನೀಡಲಾಗುತ್ತಿದೆ. ರಿಕ್ಷಾ ಪಾರ್ಕಿಂಗ್ ಬಳಿಯಲ್ಲೇ ಡ್ರೈನೇಜ್ ತ್ಯಾಜ್ಯಗಳು ಹರಿದಾಡುತ್ತಿದ್ದು‌, ದುರ್ನಾತದಿಂದ ಕೂಡಿರುವ ಅಲ್ಲಿ ನಿಲ್ಲಲು ಅಸಾಧ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಸ್ಪಂದನ ಇಲ್ಲವಾಗಿದೆ. ಆದಷ್ಟು ಶೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ” ಎಂದು ಫೆಡರೇಷನ್ ಎಚ್ಚರಿಕೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

ನಿಯೋಗದಲ್ಲಿ ಆಟೋರಿಕ್ಷಾ ಚಾಲಕರ ಫೆಡರೇಷನ್‌ನ ಜಿಲ್ಲಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ತೊಕ್ಕೊಟ್ಟು ಜಂಕ್ಷನ್ ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರುಗಳಾದ ದಯಾನಂದ್, ನಝೀರ್, ಪುರಂದರ, ರಾಮಕೃಷ್ಣ, ಕೃಷ್ಣ ಶೆಟ್ಟಿ ಪಿಲಾರ್, ಮುತ್ತಲಿಬ್, ಅಶ್ರಫ್, ನಾರಾಯಣ, ರಮೇಶ್, ಬಶೀರ್, ಅಬ್ಬಾಸ್, ಆಫ್ರಿದ್, ಮೆಲ್ವಿನ್ ಸೇರಿದಂತೆ 50ಕ್ಕೂ ಅಧಿಕ ರಿಕ್ಷಾ ಚಾಲಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X