ಶಿವಮೊಗ್ಗ | ಭದ್ರಾವತಿಯಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ : ಸೈಬರ್ ವಂಚನೆ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿವೃತ್ತ ಉದ್ಯೋಗಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅವರಿಗೆ ತಿಳಿಯದ ಹಾಗೆ ₹5.70 ಲಕ್ಷ ಹಣ ಆನ್‌ಲೈನ್‌ನಲ್ಲಿ ವರ್ಗಾವಣೆಯಾಗಿದೆ. ವಿಚಲಿತರಾದ ನಿವೃತ್ತ ಉದ್ಯೋಗಿ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿದಾಗ ಮೊಬೈಲ್‌ ಆಪ್‌ ಅನ್ನು ಹ್ಯಾಕ್‌ ಮಾಡಿರುವುದು ಗೊತ್ತಾಗಿದೆ.

ಭದ್ರಾವತಿಯ ನಿವೃತ್ತ ಉದ್ಯೋಗಿಯ (ಹೆಸರು ಗೌಪ್ಯ) ಮೊಬೈಲ್‌ಗೆ ಬ್ಯಾಂಕ್‌ನಿಂದ ಎರಡು ಎಸ್‌ಎಂಎಸ್‌ ಬಂದಿತ್ತು. ಅದನ್ನು ತೆರೆದು ನೋಡಿದಾಗ ₹5.70 ಲಕ್ಷ ಹಣ ಕಡಿತವಾಗಿರುವುದು ಗೊತ್ತಾಗಿದೆ. ಕೂಡಲೆ ನಿವೃತ್ತ ಉದ್ಯೋಗಿಯು ಬ್ಯಾಂಕ್‌ಗೆ ತೆರಳಿ ವಿಚಾರಿಸಿದ್ದಾರೆ. ಪರಿಶೀಲನೆ ನಡೆಸಿದ ಮ್ಯಾನೇಜರ್‌, ನಿವೃತ್ತ ಉದ್ಯೋಗಿಯ ಮೊಬೈಲ್‌ ಬ್ಯಾಂಕಿಂಗ್‌ ಆಪ್‌ ಹ್ಯಾಕ್‌ ಆಗಿದೆ ಎಂದು ತಿಳಿಸಿದ್ದಾರೆ.

ನಿವೃತ್ತ ಉದ್ಯೋಗಿಯ ಮಾಹಿತಿಯನ್ನು ಕದ್ದು ಅವರ ಮೊಬೈಲ್‌ನಲ್ಲಿದ್ದ ಬ್ಯಾಂಕ್‌ ಆಪ್‌ ಹ್ಯಾಕ್‌ ಮಾಡಲಾಗಿದೆ. ತಮಗೆ ಒ.ಟಿ.ಪಿ ಬಾರದೆ ಹಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Advertisements

ಶಿವಮೊಗ್ಗದ ಸಿ.ಇ.ಎನ್.‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X