ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

Date:

Advertisements

ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಗಾಳಿ ಆಂಜನೇಯಸ್ವಾಮಿ ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ನುಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿಗೆ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗಿತ್ತು. ಇದೀಗ ಹೈಕೋರ್ಟ್ ಸಹ ಸರ್ಕಾರದ ಕ್ರಮ ಸರಿ ಇದೆ ಎಂದು ತಡೆ ನೀಡಲು ನಿರಾಕರಿಸಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ

ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಎಂದು ಘೋಷಣೆ ಮಾಡಿತ್ತು.

ಸರ್ಕಾರದ ಆದೇಶದಲ್ಲಿ ಏನಿದೆ?

“ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟ್ರಸ್ಟ್​ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ ಸೆಕ್ಷನ್ 42 ಮತ್ತು 43ರನ್ವಯ “ಘೋಷಿತ ಸಂಸ್ಥೆ” ಎಂದು ಘೋಷಿಸಲಾಗಿದೆ” ಎಂದು ಆದೇಶ ಹೊರಡಿಸಲಾಗಿದೆ.

ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X