ಶಿವಮೊಗ್ಗ | ಸರ್ ಎಂ. ವಿ, ಕಿತ್ತೂರು ಚನ್ನಮ್ಮ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಕನಕದಾಸ, ಕೆಂಪೇಗೌಡರ ನಾಣ್ಯ ಬಿಡುಗಡೆಗೆ ಆಗ್ರಹ

Date:

Advertisements

ಶಿವಮೊಗ್ಗ, ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘವು , ಕರ್ನಾಟಕದ ಮಹಾನ್ ವ್ಯಕ್ತಿಗಳಾದ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ, ವೀರರಾಣಿ ಕಿತ್ತೂರು ಚನ್ನಮ್ಮ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಭಕ್ತ ಕನಕದಾಸ ಹಾಗೂ ಕೆಂಪೇಗೌಡರ ನಾಣ್ಯಗಳನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ದೇವದಾಸ ನಾಯಕ್, ಈವರೆಗೆ ದೇಶದ ವಿವಿಧೆಡೆಗಳ ಮಹಾನ್ ವ್ಯಕ್ತಿಗಳ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿದ್ದು, ಅವುಗಳಲ್ಲಿ 5 ಮತ್ತು 10 ರೂ. ನಾಣ್ಯಗಳನ್ನು ಚಲಾವಣೆಗೆ ಬಿಡುಗಡೆ ಮಾಡುವಂತೆ ಸಂಘವು ಕೇಂದ್ರವನ್ನು ಆಗ್ರಹಿಸಿದರು.

ಈ ಹಿಂದೆ ಯಾವುದೇ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ 5 ಅಥವಾ 10 ರೂಪಾಯಿ, ನಾಣ್ಯಗಳನ್ನು ಚಲಾವಣೆಗೆ ಬಿಡಲಾಗುತ್ತಿತ್ತು. ಆದರೆ ಈಗ ಈ ನಿಯಮ ಕೈಬಿಟ್ಟಿರುವುದರಿಂದ ಇಂತಹ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಸಂಗ್ರಹಿಸುವುದು ದುಬಾರಿಯಾಗಿ ಪರಿಣಮಿಸಿದೆ.

ಹೀಗಾಗಿ ಕೇಂದ್ರ ಸರ್ಕಾರ ಮಹಾನ್ ವ್ಯಕ್ತಿಗಳು ಸೇರಿದಂತೆ ಇತರೆ ವಿಶೇಷ ನಾಣ್ಯಗಳ ಜೊತೆಗೆ ಚಲಾವಣೆ ನಾಣ್ಯಗಳನ್ನು ಬಿಡುಗಡೆ ಮಾಡುವ ಮೂಲಕ ನಾಣ್ಯ ಸಂಗ್ರಾಹಕರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.

ಪ್ರಪಂಚದ ಬಹುತೇಕ ದೇಶಗಳಲ್ಲಿ ನೋಟುಗಳ ಮೇಲೆ ಅಲ್ಲಿನ ವಿವಿಧ ಪ್ರಮುಖ ವ್ಯಕ್ತಿಗಳ ಚಿತ್ರಗಳನ್ನು ಮುದ್ರಿಸಲಾಗುತ್ತಿದೆ. ಆದರೆ ಭಾರತದಲ್ಲಿ ಮಹಾತ್ಮಗಾಂಧಿ ಹೊರತುಪಡಿಸಿದರೆ ಇತರೆ ಮಹಾನ್ ವ್ಯಕ್ತಿಗಳ ಭಾವಚಿತ್ರಗಳ ನೋಟುಗಳು ಮುದ್ರಣಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೋಟುಗಳ ಮೇಲೆ ಸ್ವಾಮಿ ವಿವೇಕಾನಂದ, ಜಗಜ್ಯೋತಿ ಬಸವೇಶ್ವರ, ಸರ್ ಎಂ.ವಿಶ್ವೇಶ್ವರಯ್ಯ, ಬಾಲಗಂಗಾಧರ ತಿಲಕ್, ಭಗತ್ ಸಿಂಗ್, ಲಾಲಾ ಲಜಪತರಾಯ್, ಛತ್ರಪತಿ ಶಿವಾಜಿ, ಅಂಬೇಡ್ಕರ್‌ರವರಂತಹ ಮಹಾನ್ ವ್ಯಕ್ತಿಗಳ ಭಾವಚಿತ್ರ ಮುದ್ರಿಸುವಂತೆ ಆಗ್ರಹಿಸಿದರು.

ನಾಣ್ಯಗಳ ಮುದ್ರಣದಲ್ಲಿ ಕೇಂದ್ರಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದ್ದು, ಕರ್ನಾಟಕದ ಬಸವೇಶ್ವರ, ಕವಿ ಮುದ್ದಣ ಮತ್ತು ಮೈಸೂರು ವಿವಿ ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರದ ನಾಣ್ಯಗಳನ್ನು ಮಾತ್ರವೇ ಬಿಡುಗಡೆ ಮಾಡಿದ್ದು, ಬೇರೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನ್ ವ್ಯಕ್ತಿಗಳ ನಾಣ್ಯಗಳ ಬಿಡುಗಡೆ ಬೆರಳೆಣಿಕೆಯಷ್ಟು ಇಲ್ಲ ಎಂದು ಸಂಘವು ಆತಂಕ ವ್ಯಕ್ತಪಡಿಸಿದೆ.

ಕೂಡಲೇ ಮೇಲ್ಕಂಡ ಮಹಾನ್ ವ್ಯಕ್ತಿಗಳ ನಾಣ್ಯಗಳನ್ನು ಚಲಾವಣೆಗೆ ಬಿಡುಗಡೆ ಮಾಡುವ ಮೂಲಕ ಕರ್ನಾಟಕ ರಾಜ್ಯಕ್ಕೆ ನ್ಯಾಯವೊದಗಿಸುವಂತೆ ಆಗ್ರಹಿಸಿದರು..

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X