ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

Advertisements

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದ ಹಾಗೂ ಈವರೆಗೆ ಸ್ಪಷ್ಟ ಆದೇಶ ನೀಡದ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು “2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ರೂ.15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿತ್ತು.‌ ಈ ವೇಳೆ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ಮಾಡಿ ಮಾಸಿಕ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಹೆಚ್ಚುವರಿ ಕೆಲಸಕ್ಕೆ ಇನ್ಸೆಂಟೀವ್ ಕೊಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು.‌ ಆದರೆ ಸರ್ಕಾರ ಮತ್ತು ಆರೋಗ್ಯ ಇಲಾಖೆ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಇದುವರೆಗೂ ಕ್ರಮ ಕೈಗೊಳ್ಳದೇ ಹಾಗೂ ಈವರೆಗೆ ಸ್ಪಷ್ಟ ಆದೇಶ ನೀಡದೇ ವಂಚಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

1002328912

“ಈ ಕೂಡಲೇ ಅಂದು ನೀಡಿದ ಭರವಸೆಯಂತೆ ಬೇಡಿಕೆ ಈಡೇರಿಸುವ ಜೊತೆಗೆ ನಗರದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಯಾವುದೇ ಪರಿಹಾರ ನೀಡದೇ 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.5 ಲಕ್ಷ ನೀಡುವ ಬಗ್ಗೆ ನಿರ್ಣಯಿಸಬೇಕು. ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರಿಗೆ ಪ್ರತೀ ತಿಂಗಳು ಸರಿಯಾಗಿ ವೇತನ ಆಗುತ್ತಿಲ್ಲ. ಈಗಲೂ ರಾಜ್ಯದಾದ್ಯಂತ 2-3 ತಿಂಗಳ ಪ್ರೋತ್ಸಾಹಧನ ಟಾಕಿ ಇದೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.‌

ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಆಶಾ ಸಂಘಟನೆಯ ದಾವಣಗೆರೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳಿಗೆ ಮಾಯಕೊಂಡ ಶಾಸಕರಾದ ಕೆ ಎಸ್ ಬಸವಂತಪ್ಪರವರ ಮೂಲಕ ಮನವಿ ಸಲ್ಲಿಸಲಾಯಿತು.

1002328910

ನೂರಾರು ಆಶಾ ಕಾರ್ಯಕರ್ತೆಯರು ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಮಾನ್ಯ ಗಣಿ ಮತ್ತು ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಎಸ್.ಎಸ್.ಮಲ್ಲಿಕಾರ್ಜುನ್ ರವರ ಮನೆಯವರೆಗೆ ತೆರಳಿ ಮಾನ್ಯ ಸಂಸದರು ಹಾಗೂ ದಾವಣಗೆರೆ ಉತ್ತರ ವಲಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಶಾಮನೂರು ಶಿವಶಂಕರಪ್ಪ ನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.‌

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ್ ಕುಕ್ಕುವಾಡ, ಎಐಯುಟಿಯುಸಿ ಜಿಲ್ಲಾ ಖಜಾಂಚಿ ತಿಪ್ಪೇಸ್ವಾಮಿ ಅಣಬೇರು, ಮುಖಂಡ ಮಧು ತೊಗಲೇರಿ, ಆಶಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಲಲಿತಮ್ಮ ನರಗನಹಳ್ಳಿ, ಜಿಲ್ಲಾ ಕಾರ್ಯದರ್ಶಿ ನಾಗವೇಣಿ ಹಿರೇಮಳಲಿ, ಮುಖಂಡರಾದ ಹಾಲಮ್ಮ, ತಿಪ್ಪಮ್ಮ ನೀರ್ಥಡಿ, ಎಸ್.ಆರ್. ಇಂದಿರಾ, ರೀಟಾ, ಹಳದಮ್ಮ, ರೂಪ, ಮುಂಜುಳಾ ಕೊಂಡದಹಳ್ಳಿ, ಲಕ್ಷ್ಮೀದೇವಿ, ಮಂಜಮ್ಮ ಚೀಲೂರು, ಲೀಲಾವತಿ, ಫರ್ವೀನ್ ಬಾನು ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X