ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ ಜಾರಿ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10 ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಸಚಿವರು ಜೈವಿಕ ಇಂಧನ ನೀತಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂಬಂಧ ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ಹೇಳಿದರು.

Advertisements

ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು ಪ್ರಕ್ರಿಯೆ ಆರಂಭಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದು ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವ ಕುರಿತು ಸಮ್ಮೇಳನಗಳು, ಕಾರ್ಯಗಾರಗಳು, ವಸ್ತು ಪ್ರದರ್ಶನಗಳು ಹಾಗೂ ಹೂಡಿಕೆದಾರರ ಸಮಾವೇಶಗಳಲ್ಲಿ ಭಾಗವಹಿಸಿ ಮಾಹಿತಿ ಸಂಗ್ರಸಲಾಗಿದೆ ಹಾಗೂ ಮಂಡಳಿಗೆ ಕೈಗಾರಿಕಾ ಸಂಘಟನೆಗಳು, ಸಂಸ್ಥೆಗಳು, ವಿದೇಶದ ವಿಶ್ವವಿದ್ಯಾಲಯಗಳು ಮುಂತಾದ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಚರ್ಚಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ರಾಜ್ಯದಲ್ಲಿನ ಜೈವಿಕ ಇಂಧನ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಬಯೋಚಾರ್, ಬಯೋಕೋಲ್. ಬಯೋಡೀಸೆಲ್, 2ಜಿ ಎಥನಾಲ್, ಗ್ರೀನ್ ಹೈಡ್ರೋಜನ್ ಕಾರ್ಯಯೋಜನೆಗಳಲ್ಲಿ ನಿರತರಾಗಿರುವ ಉದ್ದಿಮೆದಾರರುಗಳ ವಿಚಾರ ವಿನಿಮಯ ಸಭೆಯನ್ನು ತುಮಕೂರು ಹಾಗೂ ಬೆಂಗಳೂರು ಗಳಲ್ಲಿಆಯೋಜಿಸಲಾಗಿದ್ದು ಮಾಹಿತ ಸಂಗ್ರಹಿಸಲಾಗಿದೆ, ಶೀಘ್ರದಲ್ಲೇ ನೀತಿಯ ಕರಡು ಸಿದ್ಧಪಡಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೃಷಿ ಸಚಿವ ಚೆಲುರಾಯಸ್ವಾಮಿ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುಧೀಂದ್ರ ಎಸ್.ಇ.ಸುಧೀಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಸಮೀರ್‌ ಶುಕ್ಲಾ, ಆಯುಕ್ತೆ ಅರುಂಧತಿ ಚಂದ್ರಶೇಖರ್‌ ಹಾಗೂ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X